ಘಟನೆ ಹಿನ್ನೆಲೆಯಲ್ಲಿ ಜಗಬೋರನಹಳ್ಳಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಹಗಲಿನಲ್ಲಿಯೇ ಚಿರತೆ ಹಸುವಿನ ಮೇಲೆ ದಾಳಿ ಮಾಡಿರುವುದರಿಂದ ಜಮೀನುಗಳಿಗೆ ಹೋಗಲು ಗ್ರಾಮಸ್ಥರು ಭಯ ಪಡುವಂತಾಗಿದೆ. ಈಗಾಗಲೇ ಚಿರತೆಗಳ ಸಂಚಾರ ಈ ಭಾಗದಲ್ಲಿ ಹೆಚ್ಚಾಗಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಚಿರತೆಗಳನ್ನಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.