ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸುಭಿಕ್ಷೆ ಮತ್ತು ನಿರ್ಭಯ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿ ಮುಹಮ್ಮದ್ ಅವರ ಸಂದೇಶಗಳನ್ನು ಕನ್ನಡದ ಜನತೆಗೆ ಪರಿಚಯಿಸುವ ಉದ್ದೇಶದಿಂದ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ ಶೀರ್ಷಿಕೆಯಡಿ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶ, ಸಂವಾದ ಕಾರ್ಯಕ್ರಮಗಳು, ಚರ್ಚಾ ಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಷನ್, ಸಮಾಜ ಸೇವಾ ಚಟುವಟಿಕೆಗಳು ಮತ್ತು ಸಾಹಿತ್ಯ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜತೆಗೆ ಅರೇಹಳ್ಳಿಯ ಹಿರಾ ಸೆಂಟರ್‌ನಲ್ಲಿ ಸೆ.1 ರಂದು ಸೀರತ್ ಪ್ರವಚನ ನಡೆಯಲಿದ್ದು, ಎಲ್ಲ ಸಮುದಾಯದವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.