ಉಜ್ಜಯಿನಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವಕ್ಕೆ ಸಿದ್ಧತೆ

ಬೇಲೂರಲ್ಲಿ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ 1008 ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ತೆಂಕಲಗೋಡು ಬೃಹನ್ಮಠ ಯಸಳೂರಿನ ಶ್ರೀಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಬಿ.ಬಿ.ಶಿವರಾಜ್, ನಿಂಗರಾಜು, ದೊಡ್ಡವೀರೇಗೌಡ, ಚೇತನ್ ಇತರರಿದ್ದರು.
ಬೇಲೂರಲ್ಲಿ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ 1008 ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ತೆಂಕಲಗೋಡು ಬೃಹನ್ಮಠ ಯಸಳೂರಿನ ಶ್ರೀಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಬಿ.ಬಿ.ಶಿವರಾಜ್, ನಿಂಗರಾಜು, ದೊಡ್ಡವೀರೇಗೌಡ, ಚೇತನ್ ಇತರರಿದ್ದರು.
Published on
ಬೇಲೂರು: ಬೇಲೂರಿನಲ್ಲಿ ಸೆ.30 ಹಾಗೂ ಅಕ್ಟೋಬರ್ 1 ರಂದು ಆಯೋಜಿಸಿರುವ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ 1008 ಜಗದ್ಗುರು ಶ್ರೀಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮ ಜಾಗೃತಿ ಸಮಾವೇಶವನ್ನು ಸರ್ವ ಧರ್ಮಿಯರ ಸಹಭಾಗಿತ್ವದೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ ಎಂದು ತೆಂಕಲಗೋಡು ಬೃಹನ್ಮಠ ಯಸಳೂರಿನ ಶ್ರೀಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಶ್ರೀಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮ ಜಾಗೃತಿ ಸಮಾವೇಶವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಧರ್ಮದ ಮೂಲ ಆಶಯ ಮನುಷ್ಯನಲ್ಲಿ ಉತ್ತಮ ಸಂಸ್ಕಾರ, ಪರಸ್ಪರ ಗೌರವ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದಾಗಿದೆ. ಯಾವುದೇ ಧರ್ಮವಾಗಲಿ, ಮನುಷ್ಯರಲ್ಲಿ ಶಾಂತಿ, ಪ್ರೀತಿ ಮತ್ತು ಸೌಹಾರ್ದ ಬೆಳೆಸುವ ಸಂದೇಶವನ್ನು ನೀಡುತ್ತದೆ. ಆದ್ದರಿಂದ ಧರ್ಮದ ಹೆಸರಿನಲ್ಲಿ ಭೇದಭಾವಕ್ಕೆ ಅವಕಾಶ ನೀಡದೆ, ಗೌರವದಿಂದ ಬದುಕುವ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮ ಜಾಗೃತಿ ಕಾರ್ಯಕ್ರಮ ಒಂದು ಸಮುದಾಯಕ್ಕೆ ಸೀಮಿತವಲ್ಲ, ಬೇಲೂರಿನ ಸೌಹಾರ್ದ, ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆ ಪ್ರತಿಬಿಂಬಿಸುವ ಕಾರ್ಯಕ್ರಮವಾಗಿದ್ದು, ಯಶಸ್ವಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಯುವಜನರಲ್ಲಿ ಉತ್ತಮ ಚಿಂತನೆ, ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ನಿಟ್ಟಿನಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಸ್ವಾಮೀಜಿ ಆಶಿಸಿದರು.
ಸೆ.30ರಂದು ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಇಷ್ಟಲಿಂಗ ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಅ.1ರಂದು ಧರ್ಮ ಜಾಗೃತಿ ಸಮಾವೇಶ, ಶಿವದೀಕ್ಷಾ ಕಾರ್ಯಕ್ರಮ ಹಾಗೂ ವಧು-ವರರ ಸಮಾವೇಶವು ಬೇಲೂರಿನ ಶ್ರೀಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ನೆರವೇರಲಿದ್ದು, ಬೇಲೂರು ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು, ಸಾರ್ವಜನಿಕರು ಹಾಗೂ ವಿವಿಧ ಧರ್ಮೀಯರು ಸೌಹಾರ್ದತೆಯಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಬಿ.ಶಿವರಾಜ್, ವೀರಶೈವ ಮುಖಂಡರಾದ ನಿಂಗರಾಜು, ದೊಡ್ಡವೀರೇಗೌಡ, ಚೇತನ್, ಯೋಗೀಶ್‌ಗೌಡ ಸೇರಿದಂತೆ ತಾಲೂಕು ವೀರಶೈವ ಪುರೋಹಿತ ಟ್ರಸ್ಟ್‌ನ ಮುಖಂಡರು ಹಾಗೂ ಸಮುದಾಯದ ಮುಖಂಡರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net