ವಿಜೃಂಭಣೆಯ ಹನುಮಂತೋತ್ಸವ

ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಹನುಮಂತೋತ್ಸವ ನೆರವೇರಿತು.
ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಹನುಮಂತೋತ್ಸವ ನೆರವೇರಿತು.
Published on
ಬೇಲೂರು: ಶ್ರೀ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವದ 7ನೇ ದಿನವಾದ ಭಾನುವಾರ ತಡರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಹನುಮಂತೋತ್ಸವ ವಿಜೃಂಭಣೆಯಿಂದ ನೆರವೇರಿತು.
ಹನುಮಂತೋತ್ಸವದ ಅಂಗವಾಗಿ ನಾಡಗೌಡರು, ನಾಡ ಪಟೇಲರು ರಾತ್ರಿ 11.30ಕ್ಕೆ ಮಂಗಳವಾದ್ಯ, ಕಹಳೆ, ತಮಟೆ ವಾದ್ಯದಲ್ಲಿ ಮೆರವಣಿಗೆಯಲ್ಲಿ ಆಗಮಿಸಿ ಶ್ರೀ ಚನ್ನಕೇಶವಸ್ವಾಮಿಗೆ ಪ್ರದಕ್ಷಿಣೆ ಹಾಕಿದ ನಂತರ ಅರ್ಚಕರು ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಿದರು. ನಂತರ ಶ್ರೀ ಚನ್ನಕೇಶವಸ್ವಾಮಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಉತ್ಸವದ ಮಂಟಪವನ್ನು ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿದರು. ದೇಗುಲದ ವಿಧಿ ವಿಧಾನಗಳೊಂದಿಗೆ ಮಂಗಳವಾದ್ಯದೊಂದಿಗೆ ದೇಗುಲದ ಅಷ್ಟ ಬೀದಿಗಳಲ್ಲಿ ಹನುಮಂತೋತ್ಸವವನ್ನು ಸಾವಿರಾರು ಭಕ್ತರೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ದೇವಾಲಯದ ದೇಗುಲದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟರ್, ನರಸಿಂಹ ಪ್ರಿಯ ಭಟ್ಟರ್, ಇಒ ಯೋಗೇಶ್, ತಾಲೂಕು ಆಡಳಿತದ ಸಿಬ್ಬಂದಿ, ಅಡ್ಡೆಗಾರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net