ಆಳೂರು ಮಾರಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿಕೊಂಡು ರಂಗಸ್ವಾಮಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದರು. ಈ ವೇಳೆ ಚಿಕ್ಕಕೆರೆ ಹಳ್ಳದ ಬಳಿ ಹೊಳೇನರಸೀಪುರ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.