

ಪ್ರಮುಖ ಮುಖ್ಯಾಂಶಗಳು
ಹಾಸನ:
ಹೇಮಾವತಿ ಅಣೆಕಟ್ಟು ವ್ಯಾಪ್ತಿಯಲ್ಲಿ ಬರುವ ರೈತರ ಜಮೀನಿಗೆ ನೀರು ಕೊಡಬೇಕು ಹಾಗೂ ಅಚ್ಚುಕಟ್ಟು ಪ್ರದೇಶದ ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಮಂಗಳವಾರ ಹೇಮಾವತಿ ಮುಖ್ಯ ಅಭಿಯಂತರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನಾಕಾರರು ನಮ್ಮ ನೀರು ನಮ್ಮ ಹಕ್ಕು, ನಮ್ಮ ನೀರು ನಮಗೆ ಇರಲಿ, ರೈತರನ್ನು ಉಳಿಸಿ ಎಂಬ ಘೋಷಣೆಗಳನ್ನು ಕೂಗಿದರು.
ಮೊನ್ನೆ ಸರ್ವಪಕ್ಷ ಸಭೆ ಏರ್ಪಡಿಸುವ ಬದಲು ಏಪ್ರಿಲ್ ತಿಂಗಳಲ್ಲೇ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಹಿಂದೆ ಯಡಿಯೂರಪ್ಪ ಅವರ ಸರ್ಕಾರದ ಸಂದರ್ಭದಲ್ಲಿ ಬರದ ಸಲುವಾಗಿ ರೈತರ ಎರಡು ಹೆಕ್ಟೇರ್‌ಗೆ 56 ಸಾವಿರ ಪರಿಹಾರ ನೀಡಿತ್ತು. ೀಗ ರಾಜ್ಯ ಸರ್ಕಾರ ರೈತರಿಗೆ ಎರಡು ಹೆಕ್ಟೇರ್‌ಗೆ ಕನಿಷ್ಠ 1 ಲಕ್ಷ ರೂ.ಪರಿಹಾರ ನೀಡಲಿ ಎಂದು ಒತ್ತಾಯಿಸಿದರು. ತಮಿಳುನಾಡಿನಲ್ಲಿ ಮುಂಗಾರು, ಹಿಂಗಾರು ಎರಡು ಬೆಳೆ ಬೆಳೆಯುತ್ತಾರೆ. ಈ ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಸಮಿತಿ ಮುಂದೆ ಮಂಡಿಸಬೇಕಿತ್ತು. ರಾಜ್ಯದ ರೈತರ ಪರವಾಗಿ ಅಂಕಿ-ಅಂಶಗಳ ಸಹಿತ ವಾದ ಮಂಡಿಸಬೇಕಿತ್ತು. ಅದನ್ನು ಬಿಟ್ಟು ಈಗ ಸಭೆಗಳನ್ನು ಮಾಡಿದರೆ ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಡಿ.ಕೆ.ಶಿವಕುಮಾರ್‌ಗೆ ರಿಯಲ್ ಎಸ್ಟೇಟ್ ಮೇಲೆ ಹೆಚ್ಚಿನ ಆಸಕ್ತಿ ಇರುವುದರಿಂದ ರೈತರ ಕಷ್ಟದ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮಾನಸಿಕ ಸ್ಥೈರ್ಯತುಂಬದೆ ರೈತರನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಮೂರು ವರ್ಷದಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡುವುದನ್ನು ಮರೆತು ಒಕ್ಕೂಟ ವ್ಯವಸ್ಥೆಯಲ್ಲಿ ಕೆಲಸ ಮಾಡಬೇಕು.