ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಮುಖಂಡರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎಂಬ ಕುರಿತು ಚರ್ಚೆ ನಡೆಸಲಾಗಿದ್ದು, ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ ಎಂದರು.