ಪ್ರಾಬಲ್ಯ ಆಧಾರದಲ್ಲಿ ಟಿಕೆಟ್ ನೀಡಲ್ಲ

ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ಸಂಘಟನಾ ಪರ್ವ ಕಾರ್ಯಕ್ರಮವನ್ನು ಪ್ರೀತಂ ಗೌಡ ಉದ್ಘಾಟಿಸಿದರು. ಸಿ.ಆರ್.ಚಿದಾನಂದ್, ದಮ್ಮನಿಂಗಳ ರವಿ, ನಂಜುಂಡ ಮೈಮ್ ಇದ್ದರು.
ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ಸಂಘಟನಾ ಪರ್ವ ಕಾರ್ಯಕ್ರಮವನ್ನು ಪ್ರೀತಂ ಗೌಡ ಉದ್ಘಾಟಿಸಿದರು. ಸಿ.ಆರ್.ಚಿದಾನಂದ್, ದಮ್ಮನಿಂಗಳ ರವಿ, ನಂಜುಂಡ ಮೈಮ್ ಇದ್ದರು.
Published on
ಶ್ರವಣಬೆಳಗೊಳ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಯಾವ ಕ್ಷೇತ್ರಗಳಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆಲುವು ಸಾಧಿಸಬಹುದು ಎಂಬುದನ್ನು ಸಮೀಕ್ಷೆಗಳ ಆಧಾರದಲ್ಲಿ ನಿರ್ಧರಿಸಲಾಗುವುದು. ಕೇವಲ ಪ್ರಾಬಲ್ಯದ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡುವುದಿಲ್ಲ ಎಂದು ಮಾಜಿ ಶಾಸಕ ಪ್ರೀತಮ್ ಗೌಡ ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ಶ್ರವಣಬೆಳಗೊಳ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಸಂಘಟನಾ ಪರ್ವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೋರ್ ಕಮಿಟಿಯ ಮುಂದೆ ಇಡಲಾಗುವುದು. ಅಲ್ಲಿನ ನಿರ್ಣಯವನ್ನು ದೆಹಲಿಗೆ ಕಳುಹಿಸಲಾಗುತ್ತದೆ. ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲಾಗುತ್ತಿದೆ. ಕಾರ್ಯಕರ್ತರಿಗೆ ಶಕ್ತಿ ತುಂಬುವುದೇ ಮುಖ್ಯ ಗುರಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯಾಧ್ಯಕ್ಷರು ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯಾದ್ಯಂತ ಪ್ರವಾಸ ನಡೆಸುವಂತೆ ಸೂಚಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಸಂಘಟನೆಗೆ ಒತ್ತು ನೀಡಲಾಗಿದೆ. ಕಾರ್ಯಕರ್ತರ ಸಭೆಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವ ಕೆಲಸ ನಡೆಯುತ್ತಿದೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅತಿ ಹೆಚ್ಚು ಬಿಜೆಪಿ ಪಕ್ಷದ ಸದಸ್ಯರು ಆಯ್ಕೆ ಮಾಡುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡೋಣ ಎಂದರು.
ಮುಖಂಡ ಸಿ.ಆರ್.ಚಿದಾನಂದ್, ತಾಲೂಕು ಅಧ್ಯಕ್ಷ ಪರಮ ಗಂಗಾಧರ್, ಮಾಜಿ ಅಧ್ಯಕ್ಷ ದಮ್ಮನಿಂಗ ರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ನಂಬಿಹಳ್ಳಿ, ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಸದಸ್ಯೆ ಸಂಜಿತಾ ರೂಪೇಶ್, ಯುವ ಮೋರ್ಚಾ ಅಧ್ಯಕ್ಷ ಮನುಗೌಡ, ಪ್ರಸನ್ನಗೌಡ, ಕಂಠಿ ಸತೀಶ್, ನಂಜುಂಡ ಮೈಮ್, ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net