ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
Published on
ಆಲೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಅಂಕೇಗೌಡ ಅವರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ಮೆಕ್ಕೆಜೋಳದ ಬೆಲೆ ಕುಸಿದು ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರವು ಬೆಂಬಲ ಬೆಲೆ ಘೋಷಿಸಿದ್ದರೂ, ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು.
ಆಲೂರು ಕಟ್ಟಾಯ ಮಂಡಲದ ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಾವನೂರು ಮೋಹನ್, ಗಣೇಶ್, ನಂಜುಂಡಪ್ಪ, ಎಸ್ಸಿ ಮೊರ್ಚಾದ ಬಾಲಲೋಚನ್, ಬಸವರಾಜ್, ದೇವರಾಜು, ಕೇಶಲ ಮೂರ್ತಿ, ಎಸ್ಟಿ ಮೋರ್ಚಾದ ಸಿದ್ದಪ್ಪ, ಶೇಖರ್, ಬಿಜೆಪಿ ಕಾರ್ಯಕರ್ತರಾದ ನವೀನ್, ನಟರಾಜ್ ಸೊಂಪುರ, ಪಾಳ್ಯ ದೇವರಾಜು, ಭರಣ್, ತಾಳೂರು ವೆಂಕಟೇಶ್, ಲಕ್ಷಣ್ , ಪ್ರದೀಪ, ಧ್ರುವ, ನಿಂಗರಾಜು, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸಮುದ್ರವಳ್ಳಿ ಹರೀಶ್, ಮಹಿಳಾ ಮೋರ್ಚಾ ಯಡೂರು ಹರ್ಷಿತಾ, ಸವಿತಾ ಗಣೇಶ್ ಮುಂತಾದವರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net