ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಸನ ಹಾಗೂ ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನ ಹಾಗೂ ಯುವ ರೆಡ್ ಕ್ರಾಸ್ ಘಟಕ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಉದಯ್‌ಕುಮಾರ್, ಜಯೇಂದ್ರ ಕುಮಾರ್, ಅಮ್ಜದ್‌ಖಾನ್, ಭೀಮರಾಜ್ ಇತರರು ಇದ್ದರು.
ಹಾಸನ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಸನ ಹಾಗೂ ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನ ಹಾಗೂ ಯುವ ರೆಡ್ ಕ್ರಾಸ್ ಘಟಕ ಆಶ್ರಯದಲ್ಲಿ ಇತ್ತೀಚೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಹೆಮ್ಮಿಗೆ ಮೋಹನ್ ಹಾಗೂ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಕೆ.ಎನ್.ಮುನಿಸ್ವಾಮಿ ಗೌಡ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ 63 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಡಾ.ಅಗರ್‌ವಾಲ್ ಕಣ್ಣಿನ ಆಸ್ಪತ್ರೆ ವತಿಯಿಂದ 200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರ್ದೇಶಕ ಉದಯ್‌ಕುಮಾರ್, ಜಯೇಂದ್ರ ಕುಮಾರ್, ಅಮ್ಜದ್‌ಖಾನ್, ಭೀಮರಾಜ್ ಹಾಗೂ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕ ಎಸ್.ಜಿ. ಶಶಿಕಲಾ, ಭರತ್ ಪ್ರಸಾದ್ ಇತರರಿದ್ದರು.