ಈಗಾಗಲೇ ಅಕ್ರಮ ಗೋ ಸಾಗಾಟ ಹಾಗೂ ವಧೆ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ಮೇಲೂ ವಿಶೇಷ ನಿಗಾ ವಹಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರೇವಣ್ಣ, ಹಿಂದೂಗಳಿಗೆ ಪೂಜನೀಯವಾಗಿರುವ ಗೋವಂಶ ರಕ್ಷಣೆಗೆ ಸಂವಿಧಾನದ ಚೌಕಟ್ಟಿನಲ್ಲಿ ಇರುವ ಕ್ರಮಗಳನ್ನು ವಹಿಸುವುದಾಗಿ ಭರವಸೆ ನೀಡಿದರು. ಪಿಐ ರೇವಣ್ಣ, ಬಜರಂಗದಳ ಅಧ್ಯಕ್ಷ ಗುಂಡ, ಮುಖಂಡ ಸುಮನ್ ನವಿಲಹಳ್ಳಿ ಸೇರಿದಂತೆ ಇತರರಿದ್ದರು.