ಸಂಸ್ಕಾರವಂತ ಮಕ್ಕಳಿಂದ ಸ್ವಾಸ್ಥೃ ಸಮಾಜ ನಿರ್ಮಾಣ

ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಏರ್ಪಡಿಸಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಬು ಉದ್ಘಾಟಿಸಿದರು. ಅಂಬಿಕಾ, ಹೊನ್ನುರಮ್ಮ, ವಿನಯ್ ಕುಮಾರ್ ಇತರರಿದ್ದರು.
ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಏರ್ಪಡಿಸಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಬು ಉದ್ಘಾಟಿಸಿದರು. ಅಂಬಿಕಾ, ಹೊನ್ನುರಮ್ಮ, ವಿನಯ್ ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಾಬು ಅಭಿಪ್ರಾಯ
  • ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ
ಅರಕಲಗೂಡು: ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿದಾಗ ಸ್ವಾಸ್ಥೃ ಸಮಾಜ ನಿರ್ಮಾಣ ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಬು ಅಭಿಪ್ರಾಯಪಟ್ಟರು.
ತಾಲೂಕಿನ ಕೊಣನೂರು ಬಿವಿಎಂ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಸ್ಥೃ ಸಮಾಜ ನಿರ್ಮಾಣದ ಅಗತ್ಯತೆ ಕುರಿತು ಮಕ್ಕಳು ಅರಿವು ಪಡೆದುಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಲಯನ್ಸ್ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಅಂಬಿಕಾ ಮಾತನಾಡಿ, ಆರೋಗ್ಯಕರ ಹಾಗೂ ಸ್ವಾಸ್ಥೃ ಸಮಾಜ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಮಹತ್ವದ್ದಾಗಿದೆ. ಶಿಸ್ತು, ಸ್ವಚ್ಛತೆ, ಸಮಯಪಾಲನೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಹಿರಿಯ ಶಿಕ್ಷಕಿ ಹೊನ್ನುರಮ್ಮ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆರೋಗ್ಯ ಮತ್ತು ಉತ್ತಮ ಜೀವನಶೈಲಿಯ ಕುರಿತು ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಬಿ.ಎಂ. ವಿನಯ್ ಕುಮಾರ್, ಸೇವಾ ಪ್ರತಿನಿಧಿಗಳಾದ ರತ್ನ, ನಂದಿನಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net