ಲಾರಿಗೆ ಬಸ್ ಡಿಕ್ಕಿ, ಚಾಲಕ ಸಾವು

ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತವಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್.
ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತವಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್.
Published on

ಪ್ರಮುಖ ಮುಖ್ಯಾಂಶಗಳು

  • 7 ಜನರ ಸ್ಥಿತಿ ಗಂಭೀರ
ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ಮುಂಜಾನೆ ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟು, ಮಕ್ಕಳೂ ಸೇರಿದಂತೆ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಪೈಕಿ 7ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಮುಂಜಾನೆ ಎರಡೂ ವಾಹನಗಳು ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಬರುತ್ತಿದ್ದವು. ದಂಡಿಗನಹಳ್ಳಿ ಗ್ರಾಮದ ಬಳಿ ಓವರ್‌ಟೇಕ್ ಮಾಡುವ ಆತುರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಆನಂದ್ (46) ಮತ್ತು ಪ್ರಯಾಣಿಕ ಮಂಜುನಾಥ್ (45) ಅವರನ್ನು ಹಾಸನದ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆನಂದ್ ಮೃತಪಟ್ಟಿದ್ದಾರೆ
ಉಳಿದಂತೆ ಮಂಜುನಾಥ್(60), ಸೋಮಶೇಖರ್ (54), ಕೀರ್ತನಾ(16), ಬೋರಮ್ಮ(40), ಅಂಕಿತಾ(16), ಚೇತನ್ (19), ರವಿಕುಮಾರ್, ರಾಜಶೇಖರ್, ಕಲಾವತಿ ಮತ್ತು ಅಬೂಬಕರ್ ಮೊದಲಾದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಈ ಪೈಕಿ 7 ಮಂದಿ ಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದವರು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ತೀವ್ರತೆಗೆ ಬಸ್ ಮುಂಭಾಗ ಜಖಂಗೊಂಡಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net