ಸಕಲೇಶಪುರ: ತಾಲೂಕಿನ ಕಿರವಾಲೆ ಗ್ರಾಮದಲ್ಲಿ ಕಾಡಾನೆಯೊಂದು ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಮತ್ತು ಕರುವಿನ ಮೇಲೆ ದಾಳಿ ಮಾಡಿದ್ದು, ಹಸು ತೀವ್ರವಾಗಿ ಗಾಯಗೊಂಡಿದ್ದರೆ ಕರು ಸ್ಥಳದಲ್ಲಿಯೇ ಮೃತಪಟ್ಟಿದೆ.
ಗ್ರಾಮದ ಯತೀಶ್ ಎಂಬುವವರಿಗೆ ಸೇರಿದ ಹಸು ಮತ್ತು ಕರುವಿನ ಮೇಲೆ ಶನಿವಾರ ರಾತ್ರಿ ಕಾಡಾನೆ ದಾಳಿ ನಡೆಸಿದೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಹೇಮಂತ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.