ಅಡಿಕೆ ತೋಟಕ್ಕೆ ಉರುಳಿ ಬಿದ್ದ ಕಾರು

ತಾಲೂಕಿನ ಅರೇಹಳ್ಳಿಯ ಲಿಂಗಾಪುರ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಬಿದ್ದು ಸಂಪೂರ್ಣ ಜಖಂಗೊಂಡಿರುವುದು.
ತಾಲೂಕಿನ ಅರೇಹಳ್ಳಿಯ ಲಿಂಗಾಪುರ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಬಿದ್ದು ಸಂಪೂರ್ಣ ಜಖಂಗೊಂಡಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಣಾಪಾಯದಿಂದ ಪಾರಾದ ಚಾಲಕ
ಬೇಲೂರು: ತಾಲೂಕಿನ ಅರೇಹಳ್ಳಿಯ ಲಿಂಗಾಪುರ ಗ್ರಾಮದ ಹಿಂದೂ ರುದ್ರಭೂಮಿ ಸಮೀಪ ಗುರುವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರೇಹಳ್ಳಿಯ ಮೊಹಮ್ಮದ್ ಎಂಬುವವರು ಗುರುವಾರ ಬೆಳಗ್ಗೆ ಇನ್ನೋವಾ ಕಾರಿನಲ್ಲಿ ಅರೇಹಳ್ಳಿಯಿಂದ ಬೇಲೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಲಿಂಗಾಪುರ ಗ್ರಾಮದ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದಲ್ಲಿರುವ ಎಡ ಭಾಗದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಕಾರು ಬಿದ್ದ ರಭಸಕ್ಕೆ ಕೆಲ ಅಡಿಕೆ ಮರಗಳು ಮುರಿದು ಬಿದ್ದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಕಾರು ಚಾಲಕ ಮೊಹಮದ್‌ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸಮೀಪದ ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net