ಹಾಸನ ನಗರದ ಸಾಲಗಾಮೆ ರಸ್ತೆಯ ಭಾರತೀಯ ರೆಡ್ ಕ್ರಾಸ್ ಭವನದಲ್ಲಿ ಪೌರಕಾರ್ಮಿಕ ಮಹಿಳೆಯರಿಗೆ ಗರ್ಭ ಕೊರಳ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಚ್.ಪಿ.ಮೋಹನ್, ಡಾ.ಸಾವಿತ್ರಿ, ಡಾ.ರಂಗಲಕ್ಷ್ಮೀ, ಡಾ. ವಿಶಾಲಕ್ಷ್ಮೀ, ಡಾ.ಆದರ್ಶ್, ಇಂಜಿನಿಯರ್ ಕವಿತಾ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಆರಂಭದಲ್ಲೇ ಗರ್ಭ ಕೊರಳ ಕ್ಯಾನ್ಸರ್ ತಡೆ ಸಾಧ್ಯ
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸಾವಿತ್ರಿ ಹೇಳಿಕೆ
ಜಯಂತಿ ಆಚರಣೆ
ಹಾಸನ: ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ, ಭಾರತ ಸೇವಾದಳ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ನವಚೇತನ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಪೌರಕಾರ್ಮಿಕ ಮಹಿಳೆಯರಿಗಾಗಿ ಗರ್ಭ ಕೊರಳ ಕ್ಯಾನ್ಸರ್, ಸ್ತನ ಕ್ಯಾನ್ಸರ್ ತಪಾಸಣೆ ಮತ್ತು ಅರಿವು ಕಾರ್ಯಕ್ರಮವನ್ನು ಬುಧವಾರ ಸಾಲಗಾಮೆ ರಸ್ತೆಯ ಭಾರತೀಯ ರೆಡ್ ಕ್ರಾಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಹಾನಗರ ಪಾಲಿಕೆಯ 50ಕ್ಕೂ ಹೆಚ್ಚು ಪೌರಕಾರ್ಮಿಕ ಮಹಿಳೆಯರು ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸಾವಿತ್ರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸ್ತನ ಕ್ಯಾನ್ಸರ್ ಹಾಗೂ ಗರ್ಭ ಕೊರಳ ಕ್ಯಾನ್ಸರ್ ಕುರಿತು ಸಮಗ್ರ ಮಾಹಿತಿ ನೀಡಿದರು. ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಈ ರೋಗಗಳನ್ನು ನಿಯಂತ್ರಿಸಲು ಸಾಧ್ಯವಿದ್ದು, ಪ್ರತಿಯೊಬ್ಬ ಮಹಿಳೆಯೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಎಚ್.ಪಿ.ಮೋಹನ್ ಮಾತನಾಡಿ, ಪೌರಕಾರ್ಮಿಕರು ನಗರ ಸ್ವಚ್ಛತೆಗೆ ದುಡಿಸುವ ಪ್ರಮುಖ ವರ್ಗವಾಗಿದ್ದು, ಅವರ ಆರೋಗ್ಯ ಕಾಪಾಡುವುದು ಸಮಾಜದ ಜವಾಬ್ದಾರಿಯಾಗಿದೆ. ಇಂತಹ ಶಿಬಿರಗಳು ಅವರಿಗೆ ಅತ್ಯಂತ ಉಪಯುಕ್ತವಾಗಿದ್ದು, ಪ್ರತಿಯೊಬ್ಬರೂ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.