ಚನ್ನರಾಯಪಟ್ಟಣ ತಂಡ ಚಾಂಪಿಯನ್

ಮಾಜಿ ಸೈನಿಕರ ಕ್ರೀಡಾಕೂಟದಲ್ಲಿ ಚನ್ನರಾಯಪಟ್ಟಣ ತಾಲೂಕು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಮಾಜಿ ಸೈನಿಕರ ಕ್ರೀಡಾಕೂಟದಲ್ಲಿ ಚನ್ನರಾಯಪಟ್ಟಣ ತಾಲೂಕು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.
Published on

ಪ್ರಮುಖ ಮುಖ್ಯಾಂಶಗಳು

  • ಚನ್ನರಾಯಪಟ್ಟಣ ತಂಡ ಚಾಂಪಿಯನ್
  • ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ಕ್ರಿಕೆಟ್ ಪಂದ್ಯಾವಳಿ
  • ಹಾಸನ
ಹಾಸನ: ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ನಗರದ ಆರ್.ಸಿ. ರಸ್ತೆಯಲ್ಲಿರುವ ಕಲಾ ಕಾಲೇಜು ಮೈದಾನದಲ್ಲಿ ಭಾನುವಾರ ಮೊದಲ ವರ್ಷದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಜಿಲ್ಲೆಯ ವಿವಿಧ ತಾಲೂಕುಗಳ 8 ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಚನ್ನರಾಯಪಟ್ಟಣ ತಾಲೂಕು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಹಾಸನದ ಹೇಮಾವತಿ ಕ್ರಿಕೆಟರ್ಸ್ ತಂಡ ದ್ವಿತೀಯ ಬಹುಮಾನ ಪಡೆದುಕೊಂಡಿತು.
ಶಾಸಕ ಸ್ವರೂಪ್ ಪ್ರಕಾಶ್, ಕೌನ್ಸಿಲರ್‌ವಾಸುದೇವ, ಅಪರ ಜಿಲ್ಲಾಧಿಕಾರಿ ಡಾ.ಮಂಜುನಾಥ್ ಭೇಟಿ ನೀಡಿ ಶುಭಕೋರಿದರು.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪ್ರದೀಪ್ ಸಾಗರ್, ಬೆಟ್ಟೇಗೌಡ, ಬಾಲಕೃಷ್ಣ, ಜಿ.ಎನ್.ನಾಗರಾಜು, ಪಿ.ಎನ್.ವೆಂಕಟೇಶ್, ಎಂ.ದೇವರಾಜು, ಜಿ.ಟಿ. ಪ್ರದೀಪ್, ಕುಶಾಲ್ ರಾಜು ಹಾಗೂ ಜಿಲ್ಲೆಯ ವಿವಿಧ ಭಾಗದ ಮಾಜಿ ಸೈನಿಕರು ಹಾಗೂ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net