ಚೆನ್ನಮ್ಮ ಶ್ರದ್ಧಾಂಜಲಿ ಕಾರ್ಯಕ್ರಮ 27ಕ್ಕೆ

ದಿ.ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ ಸಲ್ಲಿಸುವ ಉದ್ದೇಶದಿಂದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿರುವ ಸರ್ವ ಧರ್ಮದ ಮುಖಂಡರು.
ದಿ.ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ ಸಲ್ಲಿಸುವ ಉದ್ದೇಶದಿಂದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿರುವ ಸರ್ವ ಧರ್ಮದ ಮುಖಂಡರು.
Published on

ಪ್ರಮುಖ ಮುಖ್ಯಾಂಶಗಳು

  • ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್
  • ಪೂರ್ವಭಾವಿ ಸಭೆ
ಬೇಲೂರು: ಚೆನ್ನಮ್ಮ ದೇವೇಗೌಡ ಅವರ ಸ್ಮರಣಾರ್ಥ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜು. 27 ರಂದು ಸೋಮವಾರ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಗ್ಗೆ 10.30ಕ್ಕೆ ಪಕ್ಷಾತೀತವಾಗಿ, ಧರ್ಮಾತೀತ ಹಾಗೂ ಜಾತ್ಯತೀತವಾಗಿ ಆಯೋಜಿಸಲಾಗಿದೆ ಎಂದು ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಹೇಳಿದರು.
ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ಸಂಜೆ ವಿವಿಧ ಸಮಾಜದ ಮುಖಂಡರ ಸಮ್ಮುಖದಲ್ಲಿ ಆಯೋಜಿಸಿದ್ದ ದಿ.ಚೆನ್ನಮ್ಮ ದೇವೇಗೌಡರ ಶ್ರದ್ಧಾಂಜಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದಿ.ಚೆನ್ನಮ್ಮ ದೇವೇಗೌಡರು ಸಮಾಜಮುಖಿ ಚಿಂತನೆ, ಮಾನವೀಯ ಮೌಲ್ಯಗಳು ಹಾಗೂ ಸಾರ್ವಜನಿಕ ಸೇವೆಯ ಮೂಲಕ ಜನರ ಮನಸಲ್ಲಿ ಅಚ್ಚಳಿಯದಂತಹ ಸ್ಥಾನ ಪಡೆದಿದ್ದಾರೆ. ಅವರ ಆದರ್ಶಮಯ ಬದುಕು, ಸೇವಾ ಮನೋಭಾವ ಹಾಗೂ ಸಮಾಜಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಣೀಯವಾಗಿವೆ. ಈ ಉದ್ದೇಶದಿಂದ ಶ್ರದ್ಧಾಂಜಲಿ ಸಭೆಯನ್ನು ಜುಲೈ 27ರಂದು ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದು, ಈ ಶ್ರದ್ಧಾಂಜಲಿ ಸಭೆಯಲ್ಲಿ ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರೈತ ಮುಖಂಡರು, ಸಾರ್ವಜನಿಕರು. ಎಲ್ಲ ಸಮುದಾಯಗಳ ಗಣ್ಯರು ಭಾಗವಹಿಸಿ ದಿವಂಗತರಿಗೆ ಗೌರವ ನಮನ ಸಲ್ಲಿಸಲಿದ್ದಾರೆ. ಆದ್ದರಿಂದ ಅಂದಿನ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವುದರ ಮೂಲಕ ದಿ.ಚೆನ್ನಮ್ಮರ ಆತ್ಮಕ್ಕೆ ಶಾಂತಿ ಕೋರಬೇಕೆಂದು ಮನವಿ ಮಾಡಿದರು.
ಪೂರ್ವಭಾವಿ ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಪ್ರಮುಖರಾದ ನಟರಾಜ್, ಸಂಗಮ್, ಎಂ ಕೆ ಆರ್ ನಾಗೇಶ್, ಅದ್ದೂರಿ ಕುಮಾರ್, ಸಿದ್ದೇಶ್, ರಾಜಶೇಖರ್, ಬಸವಯ್ಯ, ಮರಿಯಪ್ಪ, ನಾಗೇಶ್ ಯಾದವ್, ಮಹೇಶ್, ಮಧು, ಕಾಂತರಾಜ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net