ಮಕ್ಕಳಿಗೆ ಉತ್ತಮ ಮಾರ್ಗದರ್ಶನ ಅಗತ್ಯ

ಅರಕಲಗೂಡು ತಾಲೂಕಿನ ಬಸವಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಯಮಿ ಅಂಬರೀಶ್ ಉದ್ಘಾಟಿಸಿದರು. ಮಧುಕರ್, ವಾಗೀಶ್, ಪ್ರಶಾಂತ್ ಇತರರಿದ್ದರು.
ಅರಕಲಗೂಡು ತಾಲೂಕಿನ ಬಸವಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಯಮಿ ಅಂಬರೀಶ್ ಉದ್ಘಾಟಿಸಿದರು. ಮಧುಕರ್, ವಾಗೀಶ್, ಪ್ರಶಾಂತ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • good guidance
ಅರಕಲಗೂಡು: ವಿದ್ಯಾರ್ಥಿಗಳು ಗುರಿ ಸಾಧನೆಗೆ ಉತ್ತಮ ಮಾರ್ಗದರ್ಶನ ಅತ್ಯವಶ್ಯಕ ಎಂದು ಉದ್ಯಮಿ ಅಂಬರೀಷ್ ಹೇಳಿದರು.
ತಾಲೂಕಿನ ಬಸವಾಪಟ್ಟಣದ ಮುನೇಶ್ವರ ದೇವರ ಸನ್ನಿಧಿಯಲ್ಲಿ ತೋಂಟದಾರ್ಯ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಪರಿಶ್ರಮದಿಂದ ಕಲಿತು ಜೀವನ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಂಘದ ಮಧುಕರ್ ಮಾತನಾಡಿ, ಯಾವುದೇ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ಜೀವನದ ಅರ್ಥವನ್ನು ನೀಡುತ್ತಾಳೆ. ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಅಂದರೆ, ಗುರುವಿಲ್ಲದೆ ಏನೂ ಸಾಧ್ಯವಿಲ್ಲ. ಸಂಪೂರ್ಣ ಮಾನವ ಕುಲದ ಶಾಸದಲ್ಲಿ ಗುರುವಿನ ಮಹತ್ವ ಹಾಗೂ ಅಜ್ಞಾನ ಎನ್ನುವ ಕತ್ತಲೆಯನ್ನು ತೆಗೆದು ಹಾಕಿ ಬೆಳಕನ್ನು ನೀಡುವವನೇ ಗುರು ಎಂದರು.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಟ್ರಸ್ಟ್‌ನ ವಾಗೀಶ್, ದಿನೇಶ್, ಸೋಮಣ್ಣ, ಪ್ರಶಾಂತ್, ಷಡಾಕ್ಷರಿಶೆಟ್ಟಿ, ಬಸವಣ್ಣ, ಮನು, ವಿರೂಪಾಕ್ಷ, ಶರತ್, ಈಶ್ವರಪ್ಪ, ದಯಾ, ರಾಜು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net