ಮಕ್ಕಳಿಗೆ ಅಯೋಡಿನ್ ಕೊರತೆ ಆಗದಿರಲಿ

ಅರಕಲಗೂಡು ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಆರೋಗ್ಯದ ಶಿಕ್ಷಣ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿದರು. ಗಣೇಶ್, ಚಂದ್ರಶೇಖರ್, ಜಯರಾಮ್ ಇದ್ದರು.
ಅರಕಲಗೂಡು ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಆರೋಗ್ಯದ ಶಿಕ್ಷಣ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿದರು. ಗಣೇಶ್, ಚಂದ್ರಶೇಖರ್, ಜಯರಾಮ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅರಕಲಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಸಲಹೆ
  • ಆರೋಗ್ಯ ಶಿಕ್ಷಣ ಕಾರ್ಯಕ್ರಮ
ಅರಕಲಗೂಡು: ಅಯೋಡಿನ್ ಕೊರತೆಯಿಂದ ಕಾಣಿಸಿಕೊಳ್ಳುವ ಅಸ್ವಸ್ಥತೆ ದೇಹದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರಲಿದೆ, ಹೀಗಾಗಿ ಅಯೋಡಿನ್ ಕೊರತೆ ನೀಗಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಸಲಹೆ ನೀಡಿದರು.
ಪಟ್ಟಣದ ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಐಟಿಸಿ ಹಾಗೂ ಐಜಿಡಿ ಸಂಸ್ಥೆಯ, ಸ್ಮಾರ್ಟ್ ಇಂಡಿಯಾ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಅವರು, ಅಯೋಡಿನ್ ಕುರಿತಾದ ಮಹತ್ವದ ಅಂಶಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು. ಅಯೋಡಿನ್ ಅಸ್ವಸ್ಥತೆಯನ್ನು ತಡೆಗಟ್ಟುವಿಕೆಯ ಪ್ರಮುಖ ಘಟಕಾಂಶಗಳ ಹಾಗೂ ಅಯೋಡಿನ್ ಕೊರತೆ ನೀಗಿಸುವುದು ಮುಖ್ಯವಾಗಿದೆ. ಮಕ್ಕಳ ಹದಿಹರೆಯದವರ ಸಮಸ್ಯೆಗಳು ಮತ್ತು ಸವಾಲುಗಳ ಸುರಕ್ಷತೆಯ ಬಗ್ಗೆ ಹಾಗೂ ಸಬಲೀಕರಣದ ಕುರಿತು ಆರೋಗ್ಯದ ಅರಿವಿನ ಶಿಕ್ಷಣ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಐಜಿಡಿ ಸಂಸ್ಥೆಯ ಜಿಲ್ಲಾ ಸಂಯೋಜಕ ಗಣೇಶ್ ಮತ್ತು ತಾಲೂಕು ಸಂಯೋಜಕ ಜಿ.ಎಲ್. ಚಂದ್ರಶೇಖರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net