ಯಡಿಯೂರಿನಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

 ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಸ್ವರೂಪ್ ಪ್ರಕಾಶ್ ಇತ್ತೀಚೆಗೆ ಉದ್ಘಾಟಿಸಿದರು.
ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಸ್ವರೂಪ್ ಪ್ರಕಾಶ್ ಇತ್ತೀಚೆಗೆ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ
  • 6 ಲಕ್ಷ ರೂ. ವೆಚ್ಚ
ಹಾಸನ: ಯಡಿಯೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಇತ್ತೀಚೆಗೆ ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸಿದರು.
ಗ್ರಾಮಸ್ಥರ ಹಲವು ದಿನಗಳ ಬೇಡಿಕೆಯಾಗಿದ್ದ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು 6 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಿ ಪೂಜೆ ಸಲ್ಲಿಸುವ ಮೂಲಕ ಗ್ರಾಮಸ್ಥರು ಹಾಗೂ ಜೆಡಿಎಸ್ ಕಾರ್ಯಕರ್ತರ ಸಮ್ಮುಖದಲ್ಲಿ ಚಾಲನೆ ನೀಡಿದರು.
ಇದಕ್ಕೂ ಮೊದಲು ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗ್ರಾಮಸ್ಥರು ಅದ್ದೂರಿಯಾಗಿ ಪಟಾಕಿ ಸಿಡಿಸಿ ಸಂಭ್ರಮದಿಂದ ಬರಮಾಡಿಕೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net