ಈ ವೇಳೆ ಮಾತನಾಡಿದ ಕವಿತಾ, ರಸ್ತೆ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದ ವ್ಯಾಪಾರಿಗಳಿಗೆ ಪೂರ್ವ ಸೂಚನೆ ನೀಡಲಾಗಿತ್ತು. ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವುದಕ್ಕೂ ಹಲವು ಬಾರಿ ಗಡುವು ನೀಡಲಾಗಿತ್ತು. ಸೂಚಿಸಿದ ಅವಧಿಯೊಳಗೆ ಕೆಲವರು ಅಂಗಡಿಗಳನ್ನು ತೆರವು ಮಾಡಿದ್ದರು. ಇನ್ನಷ್ಟು ಮಂದಿ ಒತ್ತುವರಿ ತೆರವುಗೊಳಿಸದ ಹಿನ್ನೆಲೆಯಲ್ಲಿ ತೆರವು ಕಾರ್ಯಚರಣೆ ಮಾಡಲಾಗಿದೆ ಎಂದರು.