ಸರ್ಕಾರಿ ಆಸ್ಪತ್ರೆಯ ಮುಂಭಾಗ ಫುಟ್‌ಪಾತ್ ತೆರವು

ಸರ್ಕಾರಿ ಆಸ್ಪತ್ರೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯಿತು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುನಾಥ್, ತಹಸೀಲ್ದಾರ್ ಮಲ್ಲಿಕಾರ್ಜುನ್ ಇತರರು ಇದ್ದರು.
ಸರ್ಕಾರಿ ಆಸ್ಪತ್ರೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯಿತು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುನಾಥ್, ತಹಸೀಲ್ದಾರ್ ಮಲ್ಲಿಕಾರ್ಜುನ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಟ್ಟಣ ಪಂಚಾಯಿತಿಯಿಂದ ಕಾರ್ಯಾಚರಣೆ
ಆಲೂರು: ಸರ್ಕಾರಿ ಆಸ್ಪತ್ರೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸೋಮವಾರ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯಿತು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಮಲ್ಲಿಕಾರ್ಜುನ್ ಸೇರಿ ಪೊಲೀಸ್ ಸಿಬ್ಬಂದಿ ಸಹಕಾರ ತೆರವುಗೊಳಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ಮಾತನಾಡಿ, ಅನಧಿಕೃತ ಶೆಡ್‌ಗಳು ತಲೆ ಎತ್ತಿದ್ದರಿಂದ ವಾಹನ ಸಂಚಾರ ಸೇರಿದಂತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಸಂಬಂಧಿಸಿದವರಿಗೆ ಶೆಡ್ ತೆರವುಗೊಳಿಸುವಂತೆ ಹಲವು ಬಾರಿ ಸೂಚನೆ ನೀಡಿದರೂ ಅವುಗಳನ್ನು ತೆರವುಗೊಳಿಸಿರಲಿಲ್ಲ. ಇದರಿಂದ ಅನಿವಾರ್ಯವಾಗಿ ಪಟ್ಟಣ ಪಂಚಾಯಿತಿ ವತಿಯಿಂದ ತೆರವುಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ. ಅಂಗಡಿಗಳ ಸರಕನ್ನು ಫುತ್‌ಪಾತ್‌ಗಳ ಮೇಲೆ ಹಾಕುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ನಾಗರಿಕರು ಹಲವು ಬಾರಿ ಪಟ್ಟಣ ಪಂಚಾಯಿತಿಗೆ ಮನವಿ ಮಾಡಿದ್ದರೂ ವರ್ತಕರು ಸ್ಪಂದಿಸಿರಲಿಲ್ಲ. ಹಾಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ತೆರವು ಮಾಡಲಾಗಿದೆ ಎಂದರು.
ಕಾರ್ಯಾಚರಣೆಯಲ್ಲಿ ಆಲೂರು ಪೊಲೀಸ್ ಠಾಣೆಯ ಸಿಬ್ಬಂದಿ, ಪೌರಕಾರ್ಮಿಕರಾದ ಕೃಷ್ಣೇಗೌಡ, ಲೋಕೇಶ್, ಪುರುಷೋತ್ತಮ್, ಮಣಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net