ಸಮನ್ವಯದಿಂದ ಶಿಕ್ಷಣದ ಗುಣಮಟ್ಟ ಹೆಚ್ಚಲಿದೆ

ಸಕಲೇಶಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯ ನಂತರ  ಶಾಸಕ ಸಿಮೆಂಟ್ ಮಂಜು ವ್ಯವಸ್ಥೆಗಳನ್ನು ಖುದ್ದಾಗಿ ಪರಿಶೀಲಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅಣ್ಣಪ್ಪಸ್ವಾಮಿ, ಮೋಹನ್ ಕುಮಾರ್, ಪ್ರದೀಪ್, ಸುದೀಶ್, ಕೌಶಿಕ್, ಪ್ರಾಂಶುಪಾಲೆ ಸಹನಾ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.
ಸಕಲೇಶಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯ ನಂತರ ಶಾಸಕ ಸಿಮೆಂಟ್ ಮಂಜು ವ್ಯವಸ್ಥೆಗಳನ್ನು ಖುದ್ದಾಗಿ ಪರಿಶೀಲಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅಣ್ಣಪ್ಪಸ್ವಾಮಿ, ಮೋಹನ್ ಕುಮಾರ್, ಪ್ರದೀಪ್, ಸುದೀಶ್, ಕೌಶಿಕ್, ಪ್ರಾಂಶುಪಾಲೆ ಸಹನಾ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.
Published on
ಸಕಲೇಶಪುರ: ಉಪನ್ಯಾಸಕರ ನಡುವಿನ ಸಮನ್ವಯ, ಉತ್ತಮ ಸಂವಹನ ಹಾಗೂ ಪರಸ್ಪರ ಸಹಕಾರದಿಂದ ಬೋಧನೆಯ ಗುಣಮಟ್ಟ ಹೆಚ್ಚುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಪನ್ಯಾಸಕರ ನಡುವೆ ಹೊಂದಾಣಿಕೆ ಇದ್ದರೆ ಕಾಲೇಜು ಅಭಿವೃದ್ಧಿ ಹೊಂದುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನೂ ನೀಡಿದರೆ ಜವಾಬ್ದಾರಿಯುತ ಪ್ರಜೆಗಳನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದರು.
ಕಾಲೇಜಿನ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತಂತೆ ಸಮಗ್ರ ಪರಿಶೀಲನೆ ನಡೆಸಿದರು. ಈ ವೇಳೆ ಪ್ರಾಂಶುಪಾಲರು ಹಾಗೂ ಸಮಿತಿ ಸದಸ್ಯರೊಂದಿಗೆ ಕಾಲೇಜಿನ ಮುಂದಿನ ಅಭಿವೃದ್ಧಿ ಕಾರ್ಯಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಈ ಶೈಕ್ಷಣಿಕ ಸಾಲಿನ ಪ್ರವೇಶಾತಿ ಕುರಿತು ಚರ್ಚಿಸಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.
ನಂತರ ಉಪನ್ಯಾಸಕರನ್ನು ಹೊರತುಪಡಿಸಿ ವಿದ್ಯಾರ್ಥಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಿದ ಶಾಸಕರು, ಕಾಲೇಜಿನ ಕುಂದು ಕೊರತೆಗಳನ್ನು ಆಲಿಸಿದರು. ಕಾಲೇಜು ಆವರಣದಲ್ಲಿ ಯಾವುದೇ ಅನೈತಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶೌಚಗೃಹ, ವಿದ್ಯುತ್ ವ್ಯವಸ್ಥೆ, ಸಿಸಿ ಕ್ಯಾಮರಾ, ಯುಪಿಎಸ್ ಸೇರಿದಂತೆ ಬೇಸಿಗೆ ಹಿನ್ನೆಲೆ ಕೊಠಡಿಗಳಲ್ಲಿನ ಫ್ಯಾನ್‌ಗಳನ್ನು ಸುಸ್ಥಿತಿಯಲ್ಲಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸೂಕ್ತ ಸಮಯದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ತಕ್ಷಣವೇ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಶಾಸಕರು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅಣ್ಣಪ್ಪಸ್ವಾಮಿ, ಮೋಹನ್ ಕುಮಾರ್, ಪ್ರದೀಪ್, ಸುದೀಶ್, ಕೌಶಿಕ್, ಪ್ರಾಂಶುಪಾಲೆ ಸಹನಾ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net