ಕಾಲೇಜಿನಲ್ಲಿ ಘಟಕಗಳ ಸಮಾರೋಪ ಸಮಾರಂಭ

ಸಕಲೇಶಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಮಾರೋಪ ಸಮಾರಂಭದಲ್ಲಿ  ಶಾಸಕ ಸಿಮೆಂಟ್ ಮಂಜು ಮಾತನಾಡಿದರು. ಪ್ರಾಂಶುಪಾಲ ರಮೇಶ್,  ಪ್ರಾಂಶುಪಾಲೆ ಸಹನಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರದೀಪ್, ವಕೀಲ ಸುಧೀಶ್, ಸಮಾಜ ಸೇವಕ ಕೌಶಿಕ್ ಇತರರು ಇದ್ದರು.
ಸಕಲೇಶಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಮಾರೋಪ ಸಮಾರಂಭದಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿದರು. ಪ್ರಾಂಶುಪಾಲ ರಮೇಶ್, ಪ್ರಾಂಶುಪಾಲೆ ಸಹನಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರದೀಪ್, ವಕೀಲ ಸುಧೀಶ್, ಸಮಾಜ ಸೇವಕ ಕೌಶಿಕ್ ಇತರರು ಇದ್ದರು.
Published on
ಸಕಲೇಶಪುರ: ವಿದ್ಯಾರ್ಥಿಗಳು ದೇಶಭಕ್ತಿ, ರಾಷ್ಟ್ರೀಯತೆ ಹಾಗೂ ಆತ್ಮವಿಶ್ವಾಸವನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಕೇವಲ ಶ್ರೀಮಂತರು, ಜಮೀನುದಾರರು ಹಾಗೂ ಪ್ರಭಾವಿಗಳಿಗೆ ಮಾತ್ರ ಮತದಾನದ ಅವಕಾಶ ಇತ್ತು. ಮಹಿಳೆಯರಿಗೂ ಮತದಾನದ ಹಕ್ಕು ಇರಲಿಲ್ಲ. ಆದರೆ ಲಿಖಿತ ಸಂವಿಧಾನ ಜಾರಿಗೆ ಬಂದ ನಂತರ ಎಲ್ಲರಿಗೂ ಸಮಾನ ಹಕ್ಕು ದೊರಕಿತು. ಇದು ಪ್ರಜಾಪ್ರಭುತ್ವದ ಮಹತ್ವ ಎಂದು ತಿಳಿಸಿದರು.
ಹಣವನ್ನು ಯಾರಾದರೂ ಕಸಿದುಕೊಳ್ಳಬಹುದು. ಆದರೆ ಶಿಕ್ಷಣ, ಜ್ಞಾನವನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಭಯಪಡಬಾರದು. ಧೈರ್ಯ ಮತ್ತು ಆತ್ಮವಿಶ್ವಾಸ ಇದ್ದರೆ ಯಾವುದೇ ಸಾಧನೆ ಸಾಧ್ಯವಾಗಲಿದೆ ಎಂದರು.
ಸಾಮಾನ್ಯ ಕುಟುಂಬದಿಂದ ಬಂದ ನಾನು ಎದುರಾಳಿಗಳಿಗೆ ಹೆದರಿ ಹಿಂದೆ ಸರಿದಿದ್ದರೆ ಶಾಸಕನಾಗಲು ಸಾಧ್ಯವಾಗುತ್ತಿರಲಿಲ್ಲ. ಧೈರ್ಯವೇ ಮುನ್ನುಗ್ಗಿಸುತ್ತದೆ ಎಂದು ಅವರು ತಮ್ಮ ಬದುಕಿನ ಅನುಭವಗಳನ್ನು ಹಂಚಿಕೊಂಡರು.
ಈ ಕಾಲೇಜಿನಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶವನ್ನು ಪ್ರೀತಿಸಬೇಕು. ರಾಷ್ಟ್ರೀಯತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವದೇಶಿ ಉತ್ಪನ್ನಗಳ ಬಳಕೆ ಮತ್ತು ಖರೀದಿಗೆ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಭವಿಷ್ಯ ರೂಪಿಸುವ ಪ್ರಮುಖ ಹಂತ:
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಮಾತನಾಡಿ, ಕಾಲೇಜು ಜೀವನವೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಹಂತವಾಗಿದೆ. ವಿದ್ಯಾರ್ಥಿಗಳು ಶಿಕ್ಷಣ ಕುರಿತು ಉಡಾಫೆ ತೋರದೆ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಸಹನಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರದೀಪ್, ವಕೀಲ ಸುಧೀಶ್, ಸಮಾಜ ಸೇವಕ ಕೌಶಿಕ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net