ಸಭೆಯಲ್ಲಿ ಐಪಿ ಫೀಡರ್ ಸಮಸ್ಯೆ, ಗಂಗಾಕಲ್ಯಾಣ ಯೋಜನೆಯ ವಿದ್ಯುತ್ ಸಂಪರ್ಕಗಳನ್ನು ಶೀಘ್ರ ಅಳವಡಿಸುವುದು, ದಿಡಗ ಭಾಗದಲ್ಲಿ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳ ಪರಿಹಾರ ಹಾಗೂ ಸಬ್ಬನಹಳ್ಳಿ ಲಿಂಕ್ ಲೈನ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಂಪರ್ಕ ಕಲ್ಪಿಸುವುದು ಆಗಾಗ್ಗೆ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯ, ಹಾಳಾಗಿರುವ ವಿದ್ಯುತ್ ಪರಿವರ್ತಕಗಳ ಬದಲಾವಣೆ ಹಾಗೂ ಹೊಸ ವಿದ್ಯುತ್ ಲೈನ್‌ಗಳ ಕಾಮಗಾರಿಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಶಾಸಕರು ಮಾಹಿತಿ ಪಡೆದರು.