ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ
ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಮತ್ತು ಡಿಜಿಟಲ್ ಕ್ಲಾಸ್ ರೂಂನ್ನು ಡಿಸಿ ಲತಾ ಕುಮಾರಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ದೂದ್ ಪೀರ್, ತಹಸೀಲ್ದಾರ್ ಗೀತಾ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ
ಲ್ಲಾಧಿಕಾರಿ ಲತಾ ಕುಮಾರಿ ಮೆಚ್ಚುಗೆ
ಹಾಸನ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸನ್ನದ್ಧಗೊಳಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಪರ್ಧಾ ಅರಿವು ಸಂಸ್ಥೆಯ ಒಡನಾಟದೊಂದಿಗೆ ತರಬೇತಿ ನೀಡಲು ಮುಂದಾಗಿರುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಮತ್ತು ಡಿಜಿಟಲ್ ಕ್ಲಾಸ್ ರೂಂ ಉದ್ಘಾಟಿಸಿ ಮಾತನಾಡಿ, ಇದೇ ರೀತಿ ಬಾಲಕರ ವಿದ್ಯಾರ್ಥಿ ನಿಲಯಗಳಲ್ಲಿ ತರಬೇತಿ ಕೇಂದ್ರ ಪ್ರಾರಂಭಿಸುವಂತೆ ಹಾಗೂ ಜಿಲ್ಲೆಯ ಬಡಮಕ್ಕಳಿಗೆ ಅನುಕೂಲವಾಗುವಂತೆ ತರಬೇತಿ ನೀಡಲು ಕ್ರಮವಹಿಸಲು ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ದೂದ್ ಪೀರ್, ತಹಸೀಲ್ದಾರ್ ಗೀತಾ ಇತರರಿದ್ದರು.