ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ರೈಲ್ವೆ ಸಂಬಂಧಿತ ಯೋಜನೆಗಳಿಗೆ ಭೂಸ್ವಾಧೀನ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಆಲೂರು-ಬೇಲೂರು ಹಾಗೂ ಚಿಕ್ಕಮಗಳೂರು ರೈಲ್ವೆ ಕಾಮಗಾರಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿ ಪ್ರಾರಂಭಕ್ಕೆ ರೈಲ್ವೆ ಇಲಾಖೆಗೆ ಹಸ್ತಾಂತರಿಸುವಂತೆ ಸೂಚಿಸಿದರು. ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಎಲ್‌ಸಿ-3 (ಹಾಸನ), ಹೊಳೆನರಸೀಪುರ-ಮಾವಿನಕೆರೆ ಮಾರ್ಗ, ಹಾಸನ-ಅರಸೀಕೆರೆ ಮಾರ್ಗ ಹಾಗೂ ಮೊಸಳೆ ಹೊಸಹಳ್ಳಿಯಲ್ಲಿ ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ಕೂಡಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.