ಅಲ್ಲದೆ ವಿದ್ಯಾರ್ಥಿನಿಯ ಶಿಕ್ಷಣವು ಕುಂಠಿತಗೊಳ್ಳದಂತೆ ಸಂಬಂಧಪಟ್ಟ ಮಕ್ಕಳ ಸಮಗ್ರ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಶಿಕ್ಷಣ ಇಲಾಖೆ ಅಗತ್ಯ ಕ್ರಮವಹಿಸಬೇಕು. ದಿನನಿತ್ಯ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳ ಕುರಿತು ವ್ಯಾಪಕವಾಗಿ ಅರಿವು ಕಾರ್ಯಕ್ರಮವನ್ನು ಮಾಡುತ್ತಿದ್ದರೂ ಇಂತಹ ಘಟನೆಗಳು ಆಗಾಗ್ಗೆ ಮರುಕಳಿಸುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು.