ಅರಸೀಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಕೆಪಿಸಿಸಿ ಯುವ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು. ಡಿ.ಕೆ.ಸಮೀರ್.ಕೆ.ಆರ್.ದಿವ್ಯಾ, ಕುಮಾರ್, ರಂಜಿತ್, ಪೃಥ್ವಿನಾಯ್ಕಿ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪಕ್ಷದ ನಗರ ಯುವ ಘಟಕದ ಅಧ್ಯಕ್ಷ ಡಿ.ಕೆ.ಸಮೀರ್ ತಾಕೀತು
ಪದಾಧಿಕಾರಿಗಳ ಕಾರ್ಯಕಾರಣಿ ಸಭೆ
ಅರಸೀಕೆರೆ: ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂದು ನಗರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ.ಸಮೀರ್ ತಾಕೀತು ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕೆಪಿಸಿಸಿ ಯುವ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ತರುವ ಉದ್ದೇಶದಿಂದ ಲಕ್ಷಾಂತರ ಕಾರ್ಯಕರ್ತರು, ಮುಖಂಡರು ದಶಕಗಳಿಂದ ಬೆವರು ಹರಿಸಿದ್ದಾರೆ. ಪರಿಣಾಮವಾಗಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರು ಶಾಸನ ಸಭೆ ಪ್ರವೇಶ ಮಾಡಿದ್ದಾರೆ. ಅಧಿಕಾರಕ್ಕೆ ಬಂದು ಮೂರು ವರ್ಷ ಸಮೀಪಿಸುತ್ತ ಬಂದಿದ್ದು ನಿಷ್ಠೆಯಿಂದ ದುಡಿದವರು ಮನೆ ಸೇರುವ ಸಂಕಟಕ್ಕೆ ಸಿಲುಕಿದ್ದು ಹೇಳುವವರು, ಕೇಳುವವರು ಯಾರೂ ಇಲ್ಲದಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆದರೆ, ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಪಕ್ಷದ ಬಾವುಟ ಹಿಡಿಯದ ವ್ಯಕ್ತಿಗಳು ಉನ್ನತ ಹುದ್ದೆ ಪಡೆದಿರುವುದು ಅತ್ಯಂತ ನೋವು ತಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದ್ದು ಹಿನ್ನಡೆ ತಪ್ಪಿಸುವ ಹೊಣೆಗಾರಿಕೆ ವರಿಷ್ಠರ ಮೇಲಿದೆ. ಹೈಕಮಾಂಡ್ ತಕ್ಷಣವೇ ಮಧ್ಯೆ ಪ್ರವೇಶಿಸಿ ಸಂಘಟನೆಗೆ ದುಡಿದವರನ್ನು ಗುರುತಿಸಿ ಆಯಕಟ್ಟಿನ ಸ್ಥಾನ, ಮಾನ ನೀಡಬೇಕು ಎಂದು ಆಗ್ರಹಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಯುವ ಮುಖಂಡರು ದನಿಗೂಡಿಸಿದರು.
ಕೆಪಿಸಿಸಿ ಯುವ ಘಟಕದ ರಾಜ್ಯ ಉಪಾಧ್ಯಕ್ಷೆ ಕೆ.ಆರ್.ದಿವ್ಯಾ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಪಕ್ಷ ಜನಪರ ಕೆಲಸ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳು ಬಡವರ ಮನೆ ತಲುಪುತ್ತಿವೆ. ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸ್ಥಳೀಯ ವಿದ್ಯಮಾನಗಳನ್ನು ಕೆಪಿಸಿಸಿ ಗಮನಕ್ಕೆ ತರುವುದಾಗಿ ಹೇಳಿ ಎಲ್ಲರನ್ನೂ ಸಮಾಧಾನಪಡಿಸಿದರು.
ಜಿಲ್ಲಾ ಉಸ್ತುವಾರಿ ಕುಮಾರ್, ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ತಾಲೂಕು ಉಪಾಧ್ಯಕ್ಷ ಪೃಥ್ವಿನಾಯ್ಕಿ ಅರುಣ್, ಮೋಹನ, ವಿನಯ್ ಗೌಡ, ಸಂಜಯ್ ನಾಯ್ಕ ,ಹೇಮಂತ್, ಆದಿತ್ಯ, ಶಂಕರ ಇತರರಿದ್ದರು.