ಚನ್ನರಾಯಪಟ್ಟಣ ಬಸ್ ನಿಲ್ದಾಣ ಎಲ್ಲ ಜಿಲ್ಲೆಗಳಿಗೂ ಸಂಪರ್ಕ ಬಿಂದುವಾಗಿದ್ದು, ನಿತ್ಯ 2,000 ಕ್ಕಿಂತಲೂ ಅಧಿಕ ಬಸ್‌ಗಳು ನಿಲ್ದಾಣಕ್ಕೆ ಆಗಮಿಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಸಿಸಿಟಿವಿ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಹೈಮಾಸ್ಟ್ ಅಳವಡಿಸಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಬೇಕಾಗಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದ್ದು ಸಂಸ್ಥೆಯವರು ಸೂಕ್ತ ನಿರ್ವಹಣೆ ಮಾಡಬೇಕೆಂದು ಸೂಚಿಸಿದರು.