ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಂಕು

ಅರಕಲಗೂಡು ತಾಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು. ಡಾ. ಸತೀಶ್, ಡಾ. ಸುನಿಲ್, ಚೌಡೇಗೌಡ, ಗ್ರಾಮಸ್ಥರು ಇದ್ದರು.
ಅರಕಲಗೂಡು ತಾಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು. ಡಾ. ಸತೀಶ್, ಡಾ. ಸುನಿಲ್, ಚೌಡೇಗೌಡ, ಗ್ರಾಮಸ್ಥರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • health sub-center
ಅರಕಲಗೂಡು: ತಾಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಈ ಹಿಂದೆ ಸಚಿವರಾಗಿದ್ದ ಅವಧಿಯಲ್ಲಿ ಕಡವಿನಹೊಸಹಳ್ಳಿ ಗ್ರಾಮಕ್ಕೆ ಹೊಸ ಗ್ರಾಮ ಪಂಚಾಯಿತಿ ನೀಡಿದ್ದು, ಊರಿನ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇದೀಗ ಗ್ರಾಮೀಣ ಪ್ರದೇಶದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆರೋಗ್ಯ ಉಪ ಕೇಂದ್ರ ನಿರ್ಮಾಣ ಮಾಡುತ್ತಿದ್ದು, ಆರು ತಿಂಗಳ ಒಳಗಾಗಿ ಸುಸಜ್ಜಿತ ಕಟ್ಟಡ ತಲೆ ಎತ್ತಲಿದೆ. ಎಲ್ಲರಿಗೂ ಇದರಿಂದ ಅನುಕೂಲ ಆಗಲಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್, ಹಾರಂಗಿ ಮಹಾ ಮಂಡಲ ಅಧ್ಯಕ್ಷ ಚೌಡೇಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ನಾಗರಾಜು, ಶೇಖರ ಮತ್ತು ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net