ಸಂಘದ ಭವನ ನಿರ್ಮಾಣ ಅಗತ್ಯ ಸಹಕಾರ

ಅರಕಲಗೂಡಿನಲ್ಲಿ ತಾಲೂಕು ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು. ಶ್ರೀ ಶಂಭುನಾಥ ಸ್ವಾಮೀಜಿ, ಶಿವಾನಂದ ತಗಡೂರು, ಜೆ.ಆರ್. ಕೆಂಚೇಗೌಡ, ಮದನ್ ಗೌಡ, ರವಿ ನಾಕಲಗೋಡು, ಎಂ.ಟಿ. ಕೃಷ್ಣೇಗೌಡ, ಶಿವಕುಮಾರ್ ಇತರರಿದ್ದರು.
ಅರಕಲಗೂಡಿನಲ್ಲಿ ತಾಲೂಕು ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು. ಶ್ರೀ ಶಂಭುನಾಥ ಸ್ವಾಮೀಜಿ, ಶಿವಾನಂದ ತಗಡೂರು, ಜೆ.ಆರ್. ಕೆಂಚೇಗೌಡ, ಮದನ್ ಗೌಡ, ರವಿ ನಾಕಲಗೋಡು, ಎಂ.ಟಿ. ಕೃಷ್ಣೇಗೌಡ, ಶಿವಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ. ಮಂಜು ಭರವಸೆ

ಅರಕಲಗೂಡು: ತಾಲೂಕು ಪತ್ರಕರ್ತರ ಸಂಘದ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ ಒದಗಿಸಿ, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಎ. ಮಂಜು ಭರವಸೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ತಾಲೂಕು ಪತ್ರಕರ್ತರ ಸಂಘದ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪತ್ರಕರ್ತರ ಭವನ ಸ್ಥಾಪನೆಗೆ ಇದೀಗ ಕಾಲ ಕೂಡಿ ಬಂದಿದೆ. ಭವನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಹಾಸನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಪತ್ರಕರ್ತರ ಭವನ ನಿರ್ಮಾಣದ ಕನಸು ನನಸಾಗುವ ಕಾಲ ಇದೀಗ ಬಂದಿದೆ. ಭವನವು ಕೇವಲ ಕಟ್ಟಡವಾಗದೆ ಸಮಾಜದ ಎಲ್ಲ ವರ್ಗದ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ಅನುಭವ ಮಂಟಪದಂತಾಗಬೇಕು ಎಂದರು.
ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ಪತ್ರಿಕಾ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ ಬಳಿಕ ಅವರಿಗೆ ಸಚಿವ ಸ್ಥಾನ ಒಲಿದಿರುವುದನ್ನು ಉಲ್ಲೇಖಿಸಿದ ಶ್ರೀಗಳು, ಅರಕಲಗೂಡಿನಲ್ಲೂ ಶಾಸಕ ಎ. ಮಂಜು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್ ಗೌಡ ಸೇರಿದಂತೆ ಪ್ರಮುಖರು ಭವನ ನಿರ್ಮಾಣಕ್ಕೆ ಸಹಕಾರ ನೀಡಲಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net