ಹಾಸನ: ಜಿಲ್ಲೆಯಲ್ಲಿ ಭೂ ಮಾಫಿಯಾ, ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಇದರ ವಿರುದ್ಧ ಸಮಗ್ರ ತನಿಖೆ ನಡೆಸಲು ತಕ್ಷಣವೇ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಕ್ರಮಕೈಗೊಳ್ಳಬೇಕು. ದಂಧೆಕೋರರ ವಿರುದ್ಧ ಕೈಜೋಡಿಸಿರುವ ಹಾಸನ ತಹಸೀಲ್ದಾರ್ ಅವರನ್ನು ಅಮಾನತು ಮಾಡಿ, ಕೂಡಲೇ ಕಾನೂನು ಕ್ರಮ ಜರುಗಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಕ್ಷಿ ಸಮೇತ ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು.