ವೋಟಿಗೋಸ್ಕರ ಗೋಹತ್ಯೆ ತಡೆಯುತ್ತಿಲ್ಲ

ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಸನ ನಗರದ ಸೀತಾರಾಮಾನಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಹೇಮಂತ್ ಜಾನೆಕೆರೆ, ಧರ್ಮ ನಾಯಕ್, ಪ್ರದೀಪ್, ರಂಜನ್ ಇತರರಿದ್ದರು.
ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಸನ ನಗರದ ಸೀತಾರಾಮಾನಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಹೇಮಂತ್ ಜಾನೆಕೆರೆ, ಧರ್ಮ ನಾಯಕ್, ಪ್ರದೀಪ್, ರಂಜನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವೋಟಿಗೋಸ್ಕರ ಗೋಹತ್ಯೆ ತಡೆಯುತ್ತಿಲ್ಲ
  • ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ
  • ರಾಮನವಮಿ ರಥೋತ್ಸವ ಕಾರ್ಯಕ್ರಮ
ಹಾಸನ: ಗೋಹತ್ಯೆ ನಿಷೇಧ ಕಾಯ್ದೆ ಇದ್ದರೂ ಮುಸ್ಲಿಮರ ವೋಟಿಗೋಸ್ಕರ ಗೋಹತ್ಯೆ ಆಗುವುದನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ನಗರದ ಮಹಾರಾಜ ಪಾರ್ಕ್ ಬಳಿ ಇರುವ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ರಾಮನವಮಿ ರಥೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಗೋ ಹತ್ಯೆ ನಡೆಸುವವರ ಬಗ್ಗೆ ಪೊಲೀಸ್ ಇಲಾಖೆಗೆ ಸಂಪೂರ್ಣ ಮಾಹಿತಿ ಇದ್ದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಕೆಲವು ವರ್ಗಗಳ ತುಷ್ಠೀಕರಣ ನಡೆಯುತ್ತಿದೆ. ಗೋಹತ್ಯೆ ತಡೆಯಲು ಮುಂದಾಗದ ಸರ್ಕಾರ ತನ್ನ ಜವಾಬ್ದಾರಿಯನ್ನು ಮರೆತಂತಿದೆ ಎಂದರು.
ಹಿಂದೂ ಕಾರ್ಯಕರ್ತರು ಗೋಹತ್ಯೆ ತಡೆಯಲು ಮುಂದಾದರೆ ಅವರ ಮೇಲೆಯೇ ಪ್ರಕರಣ ದಾಖಲಿಸುವುದು ವಿಷಾದನೀಯ. ಇದು ನ್ಯಾಯಸಮ್ಮತ ವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಗೋಮಾತೆ ಕೇವಲ ಪೂಜಾ ಪ್ರಾಣಿ ಮಾತ್ರವಲ್ಲ, ಕೃಷಿ ವ್ಯವಸ್ಥೆಯ ಮೂಲ ಆಧಾರವಾಗಿದೆ. ಹಾಲು, ಗೊಬ್ಬರ, ಔಷಧ ಸೇರಿದಂತೆ ಅನೇಕ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡುತ್ತಿದೆ. ಕೃಷಿ ಪ್ರಧಾನ ದೇಶದಲ್ಲಿ ಗೋ ಸಂರಕ್ಷಣೆ ಅತ್ಯಂತ ಮುಖ್ಯ ಎಂದರು.
ಜಿಲ್ಲೆಯಲ್ಲಿ ಗೋವುಗಳ ಕಳ್ಳಸಾಗಣೆ ಹಾಗೂ ಅಕ್ರಮ ಮಾರಾಟ ನಡೆಯುತ್ತಿದೆ. ಪೊಲೀಸ್ ಇಲಾಖೆಗೆ ಈ ಕುರಿತು ಸಂಪೂರ್ಣ ಮಾಹಿತಿ ಇದ್ದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರಕರಣಗಳನ್ನು ಬಹಿರಂಗಪಡಿಸಿದಾಗ ಮಾತ್ರ ಕ್ರಮ ನಡೆಯುತ್ತಿದೆ ಎಂದು ಟೀಕಿಸಿದರು.
ಶ್ರೀರಾಮ ಸೇನೆ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಹೇಮಂತ್ ಜಾನೆಕೆರೆ, ಜಿಲ್ಲಾ ಅಧ್ಯಕ್ಷ ಧರ್ಮ ನಾಯಕ್, ಉಪಾಧ್ಯಕ್ಷರಾದ ಪ್ರದೀಪ್, ರಂಜನ್, ವಿನಯ್, ಜಿಲ್ಲಾ ಕಾರ್ಯದರ್ಶಿ ಮಹೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net