ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಹಾಸನ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಕಾರ್ಯದರ್ಶಿ ಎಚ್.ಆರ್. ನವೀನ್‌ಕುಮಾರ್, ಸ್ಥಳೀಯ ಸಮಿತಿ ಕಾರ್ಯದರ್ಶಿ ಎಂ.ಜಿ.ಪೃಥ್ವಿ ಇತರರಿದ್ದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಹಾಸನ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಕಾರ್ಯದರ್ಶಿ ಎಚ್.ಆರ್. ನವೀನ್‌ಕುಮಾರ್, ಸ್ಥಳೀಯ ಸಮಿತಿ ಕಾರ್ಯದರ್ಶಿ ಎಂ.ಜಿ.ಪೃಥ್ವಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
  • ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ
ಹಾಸನ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಪಂಚ ರಾಜ್ಯಗಳ ಚುನಾವಣೆ ನಂತರ ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ದಾಸ್ತಾನಿದೆ, ಜನರು ಆತಂಕಪಡಬೇಕಿಲ್ಲ ಎಂದು ಹೇಳಿದ್ದ ಸರ್ಕಾರ, ಫಲಿತಾಂಶ ಹೊರಬಂದ ತಕ್ಷಣವೇ ಇಂಧನ ದರ ಏರಿಕೆ ಮಾಡಿ ಜನರ ಮೇಲೆ ಹೊರೆ ಹಾಕಿದೆ. ಇದಕ್ಕಿಂತ ದೊಡ್ಡ ಜನವಿರೋಧಿ ನಡೆ ಮತ್ತೊಂದಿಲ್ಲ. ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನರ ಬೆನ್ನು ಮುರಿಯುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.
ಇಷ್ಟೊಂದು ದೊಡ್ಡ ಪ್ರಮಾಣದ ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸುತ್ತಿದ್ದಾರೆ. ಒಮ್ಮೆ ತೈಲ ಬೆಲೆ ಹೆಚ್ಚಳವಾದರೆ ಅದಕ್ಕೆ ಪೂರಕವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆಗಳೂ ಗಗನಕ್ಕೇರುತ್ತವೆ. ಆದರೆ ರೈತ, ಕಾರ್ಮಿಕರ ಮತ್ತು ಜನಸಾಮಾನ್ಯರ ಆದಾಯದಲ್ಲಿ ಯಾವುದೇ ಏರಿಕೆಯಾಗುವುದಿಲ್ಲ. ಇದರಿಂದ ಬಡವರ ಬದುಕು ದುಸ್ತರವಾಗಲಿದೆ ಎಂದು ತಿಳಿಸಿದರು.
ಮಿತವ್ಯಯದ ಬಗ್ಗೆ ಜನರಿಗೆ ಪಾಠ ಹೇಳುವ ಪ್ರಧಾನಿ, ಮತ್ತೊಂದೆಡೆ ರೋಡ್ ಶೋ ಹಾಗೂ ವೈಮಾನಿಕ ಪ್ರದರ್ಶನಗಳಲ್ಲಿ ಭಾಗವಹಿಸುತ್ತಿರುವುದು ಜನರ ನೋವನ್ನು ಅವಹೇಳನ ಮಾಡುವಂತಿದೆ. ಬೆಲೆ ಏರಿಕೆ ಬದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಗಳನ್ನು ಕಡಿತಗೊಳಿಸಬೇಕಿತ್ತು. ಇಂಧನ ದರ ಏರಿಕೆಯ ಸಂಪೂರ್ಣ ಹೊರೆಯನ್ನು ಜನರ ಮೇಲೆ ಹಾಕಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಕಾರ್ಯದರ್ಶಿ ಎಚ್.ಆರ್. ನವೀನ್‌ಕುಮಾರ್, ಸ್ಥಳೀಯ ಸಮಿತಿ ಕಾರ್ಯದರ್ಶಿ ಎಂ.ಜಿ.ಪೃಥ್ವಿ ಇತರರಿದ್ದರು.ರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net