ಕಾಡಾನೆಗಳು ವಸತಿ ಪ್ರದೇಶದಿಂದ 5 ಕಿಮೀ ದೂರದಲ್ಲಿರುವುದನ್ನು ಜನರಿಗೆ ಮಾಹಿತಿ ನೀಡಬೇಕು. ಕಾಡಾನೆ ಹಾವಳಿ ಇರುವ ಪ್ರದೇಶದಲ್ಲಿರುವ ಕಾಫಿ ತೋಟದ ಮಾಲೀಕರು ಕಾರ್ಮಿಕರಿಗೆ ಮಾಹಿತಿ ನೀಡಬೇಕು. ಆನೆ ದಾಳಿ ಮಾಡಬಹುದಾದ ಅಪಾಯವಿರುವ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಸಹಾಯಕರು, ಬಿಲ್ ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು ಹಾಗೂ ಪೊಲೀಸರು ಸೇರಿದಂತೆ ಅಗತ್ಯವಿರುವ ಇಲಾಖೆ ಅಧಿಕಾರಿಗಳನ್ನೊಳಗೊಂಡ ಟಾಸ್ಕ್‌ಫೋರ್ಸ್ ರಚಿಸಿ ಪರಿಣಾಮಕಾರಿಯಾಗಿ ತಳಮಟ್ಟದಲ್ಲಿ ಅನುಷ್ಠಾನಕ್ಕೆ ತರುವು ಮೂಲಕ ಜನರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.