

ಚನ್ನರಾಯಪಟ್ಟಣ: ಪುರಸಭೆಯ ಹೊಸ ಕಟ್ಟಡದ ಎರಡನೇ ಹಂತದ ನಿರ್ಮಾಣ ಕಾಮಗಾರಿಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಶಾಸಕ ಸಿ.ಎಂ.ಬಾಲಕೃಷ್ಣ ಹೇಳಿದರು.ಪಟ್ಟಣದ ನವೋದಯ ವೃತ್ತದಲ್ಲಿ ಎಸ್ಇಪಿ ಯೋಜನೆಯಡಿ 3.25 ಕೊಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುರಸಭೆಯ ಹೊಸ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು.
ಎಸ್ಇಪಿ ವತಿಯಿಂದ 80 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದು 2.45 ಕೋಟಿ ರೂ. ಬರಬೇಕಾಗಿದೆ. ಆದರೆ ಈಗಾಗಲೇ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು ಇನ್ನೂ 20 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಟಿಪಿಸಿಎಂಎಸ್ ಅಧ್ಯಕ್ಷ ವೆಂಕಟೇಶ್ ಮೂರ್ತಿ, ನಿರ್ದೇಶಕ ಅನಿಲ್ ಮರಗೂರು, ಪುರಸಭೆ ಮುಖ್ಯಾಧಿಕಾರಿ ಆರ್.ಯತೀಶ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರೆ ಕೆ. ರುಕ್ಮಿಣಿ, ಎಇ ಮಂಜಣ್ಣ ಗೌಡ, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಂಜುನಾಥ್ ಹಾಗೂ ಇತರರು ಇದ್ದರು.