ಅರಕಲಗೂಡಿನ ಕೆಲಗಳಲೆ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಬಗ್ಗೆ ಮಾಜಿ ಶಾಸಕ ಪ್ರೀತಮ್‌ಗೌಡ ವಿರೋಧ ಹಾಗೂ 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಎಂಬ ಜೆಡಿಎಸ್ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಶಿಸ್ತು ಪಾಲನೆ ಕಮಿಟಿ ಇರುತ್ತೆ. ಈ ಕಮಿಟಿ ಯಾರ‌್ಯಾರು ಪಕ್ಷದ ಅಶಿಸ್ತಿನ ನಡವಳಿಕೆಗೆ ಕಾರಣರಾಗುತ್ತಾರೋ ಅವರ ಬಗ್ಗೆ ಆಯಾ ಪಕ್ಷದ ಕಮಿಟಿಯಲ್ಲಿ ಇವೆಲ್ಲವೂ ತೀರ್ಮಾನ ಮಾಡುತ್ತಾರೆ. ಬೀದಿಯಲ್ಲಿ ನಿಂತು ಬೀದಿ ರಂಪಾಟ ಮಾಡಿಕೊಂಡು ಎರಡು ಪಕ್ಷದ ಕಾರ್ಯಕರ್ತರು, ನಾಯಕರು ಗೌರವ ಕಳೆದುಕೊಳ್ಳಬೇಡಿ ಎಂದು ಅವರ ಪಕ್ಷದಲ್ಲಿ ಬುದ್ಧಿ ಹೇಳುತ್ತಾರೆಂದು ನಂಬಿದ್ದೀನಿ. ಕಾದು ನೋಡೋಣ ಎಂದು ಹೇಳಿದರು.