ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ

ವೀಣಾ, ಜಿಲ್ಲಾಧ್ಯಕ್ಷೆ, ರಾಜ್ಯ ಸರ್ಕಾರಿ ಮಹಿಳಾ ನೌಕರ ಸಂಘ
ವೀಣಾ, ಜಿಲ್ಲಾಧ್ಯಕ್ಷೆ, ರಾಜ್ಯ ಸರ್ಕಾರಿ ಮಹಿಳಾ ನೌಕರ ಸಂಘ
Published on
ಬೇಲೂರು: ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜು.11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಹೋರಾಟಕ್ಕೆ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳು, ಸಾರ್ವಜನಿಕರು ಬೆಂಬಲಿಸುವಂತೆ ರಾಜ್ಯ ಸರ್ಕಾರಿ ಮಹಿಳಾ ನೌಕರ ಸಂಘದ ಜಿಲ್ಲಾಧ್ಯಕ್ಷೆ ವೀಣಾ ತಿಳಿಸಿದ್ದಾರೆ.
ನೌಕರರು ನಿವೃತ್ತಿಯ ನಂತರ ನೆಮ್ಮದಿ ಬದುಕು ಸಾಗಿಸಲು ಹಳೇ ಪಿಂಚಣಿ ಯೋಜನೆ ಅತ್ಯಗತ್ಯವಾಗಿದೆ. ಇದು ಸರ್ಕಾರಿ ನೌಕರರ ನ್ಯಾಯಸಮ್ಮತ ಮತ್ತು ಬಹುಕಾಲದ ಬೇಡಿಕೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ವಿಳಂಬ ಮಾಡದೆ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ಶೀಘ್ರ ಜಾರಿ ಗೊಳಿಸಬೇಕು. ನಿವೃತ್ತ ನೌಕರರ ಆರ್ಥಿಕ ಭದ್ರತೆ ಹಾಗೂ ಗೌರವಯುತ ಜೀವನವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹೋರಾಟ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಅಖಿಲ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗನಗೌಡ, ಪ್ರಧಾನ ಕಾರ್ಯದರ್ಶಿ ಶೈಲಜಾ ಅವರು ಹೋರಾಟದ ನೇತೃತ್ವ ವಹಿಸಲಿದ್ದಾರೆ. ಈ ಹೋರಾಟಕ್ಕೆ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net