ರಸ್ತೆ ಒತ್ತುವರಿ ತೆರವಿಗೆ ಆಗ್ರಹ

ಆಲೂರು ತಾಲೂಕಿನ ಹುಣಸುವಳ್ಳಿ ಗ್ರಾಮ ಪಂಚಾಯಿತಿ ಅಗಸರಹಟ್ಟಿ ಗ್ರಾಮದಲ್ಲಿ ಒತ್ತುವರಿಯಾಗಿರುವ ರಸ್ತೆ ತೆರವುಗೊಳಿಸಲು ಒತ್ತಾಯಿಸಿ ಪಟ್ಟಣದ ಮಿನಿ ವಿಧಾನಸೌಧ ಪ್ರತಿಭಟನೆ ನಡೆಸಲಾಯಿತು. ಕಾಂತರಾಜು, ಕಾಂಗ್ರೆಸ್ ಮುಖಂಡ ಶಾಂತಕೃಷ್ಣ, ಛಲವಾದಿ ಮಹಾಸಭಾದ ಗೌರವಾಧ್ಯಕ್ಷ ಎ.ಟಿ.ಮಲ್ಲೇಶ್, ಗ್ರಾಮಸ್ಥರಾದ ವೆಂಕಟರಾಮೇಗೌಡ, ಜಯಣ್ಣ, ಪುಟ್ಟಸ್ವಾಮಿ, ನಾಗರಾಜು, ತಿಮ್ಮೇಗೌಡ, ಗುರುಸ್ವಾಮಿ, ದಿನೇಶ್, ಕಾಂತರಾಜು, ಜಗದೀಶ್, ಹೊನ್ನೇಗೌಡ, ಯೋಗೇಶ್, ವೆಂಕಟೇಗೌಡ ಇತರರು ಇದ್ದರು.

Published on

ಆಲೂರು:

ತಾಲೂಕಿನ ಹುಣಸುವಳ್ಳಿ ಗ್ರಾಮ ಪಂಚಾಯಿತಿ ಅಗಸರಹಟ್ಟಿ ಗ್ರಾಮದಲ್ಲಿ ಒತ್ತುವರಿಯಾಗಿರುವ ರಸ್ತೆಯನ್ನು ಕೂಡಲೇ ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಅಗಸರಹಟ್ಟಿ ಗ್ರಾಮಸ್ಥರು ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಇತ್ತೀಚೆಗೆ ಪ್ರತಿಭಟನೆ ನಡೆಸಿದರು.

ಅಗಸರಹಟ್ಟಿ ಗ್ರಾಮಸ್ಥ ಕಾಂತರಾಜು ಮಾತನಾಡಿ, ಮಾವನೂರಿನಿಂದ ಅಗಸರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ವಾಹನಗಳು, ಜಾನುವಾರುಗಳು ಹಾಗೂ ಜನಸಾಮಾನ್ಯರ ಓಡಾಟಕ್ಕೆ ತೊಂದರೆಯಾಗಿದೆ ಎಂದು ತಿಳಿಸಿದರು.
ಒತ್ತುವರಿ ಮಾಡಿಕೊಂಡ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ತಹಸೀಲ್ದಾರ್‌ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಪ್ರತಿಭಟನೆಯ ದಾರಿ ಹಿಡಿದಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಶಾಂತಕೃಷ್ಣ, ಛಲವಾದಿ ಮಹಾಸಭಾದ ಗೌರವಾಧ್ಯಕ್ಷ ಎ.ಟಿ.ಮಲ್ಲೇಶ್, ಗ್ರಾಮಸ್ಥರಾದ ವೆಂಕಟರಾಮೇಗೌಡ, ಜಯಣ್ಣ, ಪುಟ್ಟಸ್ವಾಮಿ, ನಾಗರಾಜು, ತಿಮ್ಮೇಗೌಡ, ಗುರುಸ್ವಾಮಿ, ದಿನೇಶ್, ಕಾಂತರಾಜು, ಜಗದೀಶ್, ಹೊನ್ನೇ ಗೌಡ, ಯೋಗೇಶ್, ವೆಂಕಟೇಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net