ದೇವಾಂಗ ಸಮುದಾಯ ಭವನ ಉದ್ಘಾಟನೆ

ಶಾಂತಿಗ್ರಾಮ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಂಗ ಸಮುದಾಯ ಭವನದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನೆರವೇರಿತು. ರಾಜ್ಯಸಭಾ ಸದಸ್ಯ ಕೆ.ನಾರಾಯಣ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ, ಜಿ.ಆರ್.ಮಂಜೇಶ್, ರವೀಂದ್ರ ಪಿ. ಕಲಬುರ್ಗಿ ಇತರರಿದ್ದರು.
ಶಾಂತಿಗ್ರಾಮ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಂಗ ಸಮುದಾಯ ಭವನದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನೆರವೇರಿತು. ರಾಜ್ಯಸಭಾ ಸದಸ್ಯ ಕೆ.ನಾರಾಯಣ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ, ಜಿ.ಆರ್.ಮಂಜೇಶ್, ರವೀಂದ್ರ ಪಿ. ಕಲಬುರ್ಗಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದೇವಾಂಗ ಸಮುದಾಯ ಭವನ ಉದ್ಘಾಟನೆ
  • ವಿವಿಧ ಧಾರ್ಮಿಕ ಕಾರ್ಯಕ್ರಮ
  • ಸಾರ್ವಜನಿಕರಿಗೆ ಅನ್ನಸಂತರ್ಪಣೆ
ಹಾಸನ: ಶಾಂತಿಗ್ರಾಮ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲಾದ ದೇವಾಂಗ ಸಮುದಾಯ ಭವನದ ಉದ್ಘಾಟನಾ ಸಮಾರಂಭ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇತ್ತೀಚೆಗೆ ವಿಜೃಂಭಣೆಯಿಂದ ನೆರವೇರಿದವು.
ವೇದಮೂರ್ತಿ ಶ್ರೀ ಹರಿನಾರಾಯಣಮಯ್ಯ (ಕುಂಬಳೆ) ಸಾರಥ್ಯದಲ್ಲಿ ವೈದಿಕ ಧಾರ್ಮಿಕ ವಿಧಿವಿಧಾನ ಆರಂಭಗೊಂಡವು. ವಾಸ್ತು ಹೋಮ, ವಿಶೇಷ ಪೂಜೆ, ಗೃಹಪ್ರವೇಶ, ಗಣಹೋಮ, ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಪಠಣ, ಮಹಾಪೂಜೆ ಹಾಗೂ ಪ್ರಸಾದ ವಿತರಣೆಯ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ನಂತರ ಅನ್ನಸಂತರ್ಪಣೆಯಲ್ಲಿ ಸಮಾಜದ ಸಾವಿರಾರು ಜನರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಹಂಪಿಯ ಹೇಮಕೂಟದ ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನದ ಶ್ರೀ ದಯಾನಂದಪುರಿ ಸ್ವಾಮೀಜಿ ಹಾಗೂ ಕೊಂಡೆವೂರು ಮಠದ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ನೂತನವಾಗಿ ನಿರ್ಮಿಸಲಾದ ಸಭಾಂಗಣವನ್ನು ರಾಜ್ಯಸಭಾ ಸದಸ್ಯ ಕೆ.ನಾರಾಯಣ ಉದ್ಘಾಟಿಸಿದರು. ನಂತರ ಅವರನ್ನು ದೇವಾಂಗ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಜಿ.ಆರ್. ಮಂಜೇಶ್, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಪಿ. ಕಲಬುರ್ಗಿ, ಉಪಾಧ್ಯಕ್ಷ ಎಸ್.ಸಿ.ಸತೀಶ್, ಕೊಡಗು ಅಬಕಾರಿ ಇಲಾಖೆಯ ಉಪ ಆಯುಕ್ತ ಬಿ. ನಾಗೇಶ್ ಕುಮಾರ್, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಎ.ವಿ.ನಂಜುಂಡಸ್ವಾಮಿ, ಜಿಲ್ಲಾ ದೇವಾಂಗ ನೌಕರರ ಸಂಘದ ಅಧ್ಯಕ್ಷ ಡಾ. ಬಿ.ಎಂ. ವಿಜಯ್ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net