ಕೃಷಿಯೊಂದಿಗೆ ಸ್ವಯಂ ಉದ್ಯೋಗ ಮಾಡಿದರೆ ಅಭಿವೃದ್ಧಿ ಸಾಧ್ಯ

ಅರಕಲಗೂಡು ತಾಲೂಕಿನ ಕೇರಳಾಪುರ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬಿದ್ರಾಕ ಗ್ರಾಮದಲ್ಲಿ ಆಯೋಜಿಸಿದ್ದ ರೈತಕ್ಷೇತ್ರ ಪಾಠಶಾಲೆ ತರಬೇತಿ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿ ಶಿವಣ್ಣಗೌಡ ಉದ್ಘಾಟಿಸಿದರು. ಎಚ್.ಬಿ. ಈಶ್ವರ್, ಸುನಿಲ್ ಕುಮಾರ್,  ದೇವರಾಜು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕೂಡಿಗೆ ರುಡ್‌ಸೆಟ್ ಸಂಸ್ಥೆಯ ತರಬೇತಿ ಪ್ರಾಂಶುಪಾಲ ಪ್ರಕಾಶ್ ಸಲಹೆ
  • ರೈತಕ್ಷೇತ್ರ ಪಾಠಶಾಲೆ ತರಬೇತಿ ಕಾರ್ಯಕ್ರಮ
ಅರಕಲಗೂಡು: ಗ್ರಾಮೀಣ ಪ್ರದೇಶದ ಜನರು ಕೃಷಿಯೊಂದಿಗೆ ಸ್ವಯಂ ಉದ್ಯೋಗ ಕಂಡುಕೊಂಡರೆ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದು ಎಂದು ಕೂಡಿಗೆ ರುಡ್‌ಸೆಟ್ ಸಂಸ್ಥೆಯ ತರಬೇತಿ ಪ್ರಾಂಶುಪಾಲ ಪ್ರಕಾಶ್ ಸಲಹೆ ನೀಡಿದರು.
ತಾಲೂಕಿನ ಕೇರಳಾಪುರ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಬಿದ್ರಾಕ ಗ್ರಾಮದಲ್ಲಿ ಏರ್ಪಡಿಸಿದ್ದ ರೈತಕ್ಷೇತ್ರ ಪಾಠಶಾಲೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಬಹುತೇಕ ರೈತರು ಕೃಷಿಯೊಂದನ್ನೇ ನೆಚ್ಚಿಕೊಂಡಿರುತ್ತಾರೆ. ಇದರ ಜತೆಗೆ ಸ್ವಉದ್ಯೋಗ ತರಬೇತಿಗಳನ್ನು ಪಡೆದುಕೊಂಡರೆ ಹೆಚ್ಚಿನ ಅನುಕೂಲವಾಗಲಿದೆ. ಒಂದೇ ಕೃಷಿಯಲ್ಲಿ ತೊಡಗಿಕೊಳ್ಳದೆ ಲಾಭದಾಯಕ ಬೆಳೆಗಳನ್ನು ಬೆಳೆಯಬೇಕು. ಇದರಿಂದ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಹಾಗೂ ಆರ್ಥಿಕವಾಗಿ ಉನ್ನತಿ ಹೊಂದಲು ನೆರವಾಗಲಿದೆ ಎಂದು ತಿಳಿಸಿದರು.
ಪ್ರಗತಿಪರ ಕೃಷಿ ಶಿವಣ್ಣಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಪದಾಧಿಕಾರಿ ಎಚ್.ಬಿ. ಈಶ್ವರ್, ಸಂಸ್ಥೆಯ ಕೃಷಿ ಮೇಲ್ವಿಚಾರಕ ಸುನೀಲ್ ಕುಮಾರ್, ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದೇವರಾಜು, ದೀಪಿಕಾ, ಸುಶ್ಮಿತಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net