ನೇಕಾರ ಸಮುದಾಯ ಸರ್ಕಾರದ ಮೀಸಲಾತಿಗೆ ಒಳಪಟ್ಟಿದ್ದು, ಲಭ್ಯವಿರುವ ಆರ್ಥಿಕ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕುರುಹಿನಶೆಟ್ಟಿ, ದೇವಾಂಗ ಸೇರಿದಂತೆ ನೇಕಾರ ಸಮುದಾಯಗಳ ಏಳಿಗೆಗಾಗಿ ರಾಜ್ಯ ಸರ್ಕಾರವು ನೇಕಾರರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದು, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ನೇಕಾರರಿಗೆ ಹಲವು ಸವಲತ್ತುಗಳು ಲಭ್ಯವಿದೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮಾಜದ ಪ್ರಗತಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆ ಅತ್ಯಾವಶ್ಯಕವಾಗಿದ್ದು, ಈ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದು ಅಗತ್ಯ ಎಂದರು.