ಕಸಾಪ ಗೌರವ ಕಾರ್ಯದರ್ಶಿ ಬಿ.ಬಿ.ಶಿವರಾಜ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕಿನಲ್ಲಿ ಬಡತನ ರೇಖೆಗಿಂತ ಕಡಿಮೆ ಇರುವವರನ್ನು ಗುರ್ತಿಸಿ ವಾತ್ಸಲ್ಯ ಕಿಟ್‌ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ. ಇಲ್ಲಿ ಯಾವುದೇ ಜಾತಿ, ಪಂಥವಿಲ್ಲದೆ ಅರ್ಹ ಬಡವರನ್ನ ಗುರುತಿಸುವ ಜತೆಗೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾದವರಿಗೆ ವಾತ್ಸಲ್ಯ ಯೋಜನೆಯಡಿ ಮನೆ, ಸಂಬಂಧಿಸಿದ ಪರಿಕರ ನೀಡುವ ಮೂಲಕ ಸಮಾಜ ಮುಖಿ ಕೆಲಸ ಮಾಡಲಾಗುತ್ತಿದೆ. ಇದರೊಂದಿಗೆ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ, ಕೃಷಿ, ಆರೋಗ್ಯ ಮತ್ತು ನೈರ್ಮಲ್ಯ, ಕೆರೆಗಳ ಪುನಶ್ಚೇತನ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದೆ ಎಂದರು.