ಡಿ.ಕೆ.ಶಿವಕುಮಾರ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ 25 ಅಡಿ ಎತ್ತರದ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕ್ಷೀರಾಭಿಷೇಕ ಮಾಡಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ 25 ಅಡಿ ಎತ್ತರದ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕ್ಷೀರಾಭಿಷೇಕ ಮಾಡಿದರು.
Published on
ಗಂಡಸಿ: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಪ್ರಯುಕ್ತ ಗುರುವಾರ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರು ಗಂಡಸಿ ಹ್ಯಾಂಡ್‌ಪೋಸ್ಟ್ ಸರ್ಕಲ್ ಬಳಿ ಡಿ.ಕೆ.ಶಿವಕುಮಾರ್ ಅವರ 25 ಅಡಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಶಾಲ್ ಕುಮಾರ್(ಮೆಟ್ರೋ ಬಾಬು), ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್, ತಾಪಂ ಮಾಜಿ ಸದಸ್ಯ ಪೂರ್ಣಚಂದ್ರ( ಆಗ್ರೋ ಬಾಬು), ಈಶ್ವರಪ್ಪ, ಎಪಿಎಂಸಿ ಮಾಜಿ ಸದಸ್ಯರಾದ ರಾಮಚಂದ್ರು, ಮಂಜುರಾಜ್ ಜಯರಾಮ್, ಕಾಂಗ್ರೆಸ್ ಮುಖಂಡರಾದ ಗಂಡಸಿ ನಾಗರಾಜ್, ಲಿಂಗಾಪುರ ವಾಸಣ್ಣ, ಯರಗನಾಳು ಮಲ್ಲೇಶ್, ಮುರುಗೇಗೌಡ, ಮಲ್ಲೇಶ್, ಶಂಕರೇಗೌಡ, ಶ್ರೀನಿವಾಸ್, ಬಸವನಪುರ ರಮೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net