ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ

ದಿವ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ, ಕಲೆ ಮತ್ತು ಕರಕುಶಲ ವಸ್ತುಗಳ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಗೌಡೇಗೌಡ, ಚೇತನ್, ಉಮೇಶ್, ಪುಟ್ಟೇಗೌಡ ಇತರರು ಇದ್ದರು.
ದಿವ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ, ಕಲೆ ಮತ್ತು ಕರಕುಶಲ ವಸ್ತುಗಳ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ಗೌಡೇಗೌಡ, ಚೇತನ್, ಉಮೇಶ್, ಪುಟ್ಟೇಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದಿವ್ಯ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕ ಅಧ್ಯಕ್ಷ ಗೌಡೇಗೌಡ ಹೇಳಿಕೆ
  • ವಸ್ತು ಪ್ರದರ್ಶನ
ಬೇಲೂರು: ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ ಪಾಲಕರ ಪಾತ್ರವೂ ಅಷ್ಟೇ ಮುಖ್ಯವಾಗಿದ್ದು, ದಿನನಿತ್ಯ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿ ಅವರಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ ಎಂಬುದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ದಿವ್ಯ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕ ಅಧ್ಯಕ್ಷ ಗೌಡೇಗೌಡ ಹೇಳಿದರು.
ಪಟ್ಟಣದ ನೆಹರು ನಗರದ ದಿವ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ವಿಜ್ಞಾನ, ಕಲೆ ಮತ್ತು ಕರಕುಶಲ ವಸ್ತುಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕುವುದಕ್ಕೆ ಶಾಲೆಗಳಲ್ಲಿ ಆಯೋಜಿಸುವ ಇಂತಹ ವಿಜ್ಞಾನ ವಸ್ತು ಪ್ರದರ್ಶನ, ಕರಕುಶಲ ವಸ್ತುಗಳ ಪ್ರದರ್ಶನ ಸೂಕ್ತ ವೇದಿಕೆಯಾಗಿದೆ. ವಿದ್ಯಾರ್ಥಿಗಳಾಗಿದ್ದಾಗಲೆ ಅವರಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಲು ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಅಗತ್ಯ ಜ್ಞಾನಾರ್ಜನೆಗೆ ಇದು ಒತ್ತು ನೀಡಲಿವೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹಾಗೂ ಪಾಲಕರ ಆಸಕ್ತಿ ಎದ್ದು ಕಾಣುತ್ತಿರುವುದು ಶ್ಲಾಘನೀಯವಾಗಿದೆ. ಜತೆಗೆ ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದಷ್ಟೆ ಅಲ್ಲ. ಪ್ರತಿನಿತ್ಯ ಶಾಲೆಗಳಲ್ಲಿ ಶಿಕ್ಷಕರು ಏನು ಪಾಠ ಮಾಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು ಮತ್ತು ಏನಾದರೂ ವ್ಯತ್ಯಾಸ ಕಂಡು ಬಂದಲ್ಲಿ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿ ಮಾಡಿ ಮಾಹಿತಿ ಪಡೆದು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅಲ್ಲದೆ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ. ಇಂದು ನಾವು ವಿಜ್ಞಾನ ಮತ್ತು ಆರ್ಟಿಫಿಶಿಯಲ್ ಇಂಟಲಿಜನ್ಸ್ ಯುಗದಲ್ಲಿ ಇದ್ದೇವೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗಿದ್ದು, ಪ್ರತಿವರ್ಷ ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ದಿವ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲೆ ಮುಖ್ಯ ಶಿಕ್ಷಕ ಚೇತನ್ ಮಾತನಾಡಿ, ಆಧುನಿಕ ಕಾಲ ಘಟ್ಟದಲ್ಲಿ ಮುಂದುವರಿಯುತ್ತಿದ್ದೇವೆ ಎಂಬುದನ್ನು ಮೊದಲು ಎಲ್ಲರೂ ಅರಿತು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಮುಂದಾಗಬೇಕು. ಇದರೊಂದಿಗೆ ಮಕ್ಕಳು ಮತ್ತು ಪಾಲಕರು ಮೌಢ್ಯದಿಂದ ಹೊರಬಂದು ವಿಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು. ಜತೆಗೆ ಇಂತಹ ವಿಜ್ಞಾನ, ಕಲೆ ಮತ್ತು ಕರಕುಶಲ ವಸ್ತುಗಳ ವಸ್ತು ಪ್ರದರ್ಶನಗಳು ಮಕ್ಕಳ ಮನಸ್ಸನ್ನು ವಿಕಸನಗೊಳಿಸಲು ಸಹಕಾರಿಯಾಗಲಿದೆ. ಮತ್ತು ಮಕ್ಕಳ ಆರೋಗ್ಯ ಕಾಪಾಡುವುದಕ್ಕಾಗಿ ಜಂಕ್ ಫುಡ್‌ಗಳಿಂದ ದೂರವಿರಿಸಬೇಕು. ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ಸಾಲದು ಮನೆಯಲ್ಲೂ ಮಕ್ಕಳಿಗೆ ಪಾಲಕರು ತಿಳಿಸುವ ಕೆಲಸ ಮಾಡಬೇಕು ಎಂದರು.
ದಿವ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಾಮಿಕ ವಿಭಾಗದ ಮುಖ್ಯ ಶಿಕ್ಷಕ ಉಮೇಶ್, ನಿವೃತ್ತ ಶಿಕ್ಷಕ ಪುಟ್ಟೇಗೌಡ ಸೇರಿದಂತೆ ಶಿಕ್ಷಕರು ಮತ್ತು ಪಾಲಕರು, ವಿದ್ಯಾರ್ಥಿಗಳಿದ್ದರು.
ಚಿತ್ರ:29(ಬಿಎಲ್‌ಆರ್)1-
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net