ತಾಲೂಕಿನ ಮಡಬಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿಯಿಂದ ರಸ್ತೆ ಹಾಳಾಗಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಸಾರ್ವಜನಿಕ ಸಾರಿಗೆ ಬಸ್‌ಗಳ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿರುವ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು.