ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಮ್ ಅವರ 119 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಬಡವರು, ದೀನ ದಲಿತರ ಜೀವನ ಮಟ್ಟದ ಸುಧಾರಣೆಗೆ ಹಲವು ಯೋಜನೆಗಳನ್ನು ನೀಡುವ ಮೂಲಕ ಹಸಿರು ವಲಯಕ್ಕೆ ಕ್ರಾಂತಿಕಾರಿ ಹೆಜ್ಜೆ ಇಟ್ಟವರು. ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು, ಉತ್ತಮ ಮೌಲ್ಯಗಳನ್ನು ಎಲ್ಲರೂ ಅನುಸರಿಸುವ ಮೂಲಕ ಮುನ್ನಡೆಯಬೇಕು ಎಂದು ಹೇಳಿದರು.