ಮಿಶ್ರ ಬೆಳೆ ಪದ್ಧತಿಯಿಂದ ಹೆಚ್ಚಿನ ಆದಾಯ ಗಳಿಸಿ

ಅರಕಲಗೂಡು ತಾಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ತರಬೇತಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಉದ್ಘಾಟಿಸಿದರು. ಶಿವರಾಮೇಗೌಡ, ಯೋಗೇಶ್, ರಘು ಇತರರಿದ್ದರು.
ಅರಕಲಗೂಡು ತಾಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ತರಬೇತಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಉದ್ಘಾಟಿಸಿದರು. ಶಿವರಾಮೇಗೌಡ, ಯೋಗೇಶ್, ರಘು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸಲಹೆ
  • ಕೃಷಿ ತರಬೇತಿ

ಅರಕಲಗೂಡು:

ರೈತರು ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಕೈಗೊಳ್ಳುವುದರ ಜತೆಗೆ ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸಲಹೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವತಿಯಿಂದ ಬೈಚನಹಳ್ಳಿ ವಲಯದ ಮುದ್ದನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೃಷಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಅನುದಾನಗಳು, ತೋಟಗಾರಿಕೆ ಬೆಳೆಗಳ ಅವಧಿ ಹಾಗೂ ಬೆಳೆಯುವ ವಿಧಾನಗಳ ಕುರಿತು ಮಾಹಿತಿ ನೀಡಿದರು. ತೆಂಗು ಮತ್ತು ಅಡಿಕೆ ಬೆಳೆಗಳಿಗೆ ಬಾಧಿಸುವ ಪ್ರಮುಖ ರೋಗಗಳು, ಅವುಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಔಷಧಗಳ ಬಳಕೆ ಹಾಗೂ ಸಿಂಪಡಿಸುವ ವಿಧಾನಗಳ ಬಗ್ಗೆ ವಿವರಿಸಿದರು.
ರೈತರು ಪ್ರತಿವರ್ಷ ಬೆಳೆ ವಿಮೆ ಮಾಡಿಸಿಕೊಳ್ಳುವುದು ಉತ್ತಮವಾಗಿದ್ದು, ಬೆಳೆ ನಷ್ಟ ಸಂಭವಿಸಿದ ಸಂದರ್ಭದಲ್ಲಿ ಇದು ರೈತರಿಗೆ ನೆರವಾಗಲಿದೆ ಎಂದು ತಿಳಿಸಿದರು.
ಪ್ರಗತಿಪರ ಕೃಷಿಕ ಯೋಗೇಶ್ ಮಾತನಾಡಿ, ಕೃಷಿ ಆರಂಭಿಸುವ ಮೊದಲು ಮಣ್ಣು ಪರೀಕ್ಷೆ ಮಾಡಿಸುವುದು ಮುಖ್ಯ. ಮಣ್ಣು ಪರೀಕ್ಷೆ ಮಾಡಿಸುವ ವಿಧಾನ ಹಾಗೂ ಅದರ ಆಧಾರದ ಮೇಲೆ ಸೂಕ್ತ ಬೆಳೆ ಮತ್ತು ಗೊಬ್ಬರ ಬಳಕೆ ಮಾಡುವ ಬಗ್ಗೆ ರೈತರು ತಿಳಿದುಕೊಳ್ಳಬೇಕು. ಸಾವಯವ ಗೊಬ್ಬರ ಬಳಸಿ ಕೃಷಿ ಮಾಡುವುದರೊಂದಿಗೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ರೈತರಿಗೆ ಉತ್ತಮ ಹಾಗೂ ಲಾಭದಾಯಕ ಆದಾಯ ದೊರೆಯಲಿದೆ ಎಂದು ಹೇಳಿದರು.
ಮುಖಂಡರಾದ ಶಿವರಾಮೇಗೌಡ, ರಘು, ವಲಯ ಮೇಲ್ವಿಚಾರಕಿ ಶೀಲಾ, ಕೃಷಿ ಮೇಲ್ವಿಚಾರಕ ಎಂ.ಸುನೀಲ್ ಕುಮಾರ್, ಸೇವಾ ಪ್ರತಿನಿಧಿ ರಂಜಿತಾ, ರೈತರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net